×
Ad

ಮಿಲಿಟರಿ ಕಾಲೇಜು ಸೇರ್ಪಡೆಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ

Update: 2022-07-19 21:09 IST

ಉಡುಪಿ, ಜು.೧೯: ಪ್ರಸಕತಿ ಸಾಲಿನಲ್ಲಿ ಉತತಿರಾಖಂಡ ರಾಜ್ಯದ ಡೆಹರಾ ಡೂನ್‌ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ ೮ ನೇ ತರಗತಿ ಸೇರ್ಪಡೆಗೆ ಪ್ರವೇಶ ಪರೀಕ್ಷೆಯು ಡಿ.೩ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದೆ.

ಸರಕಾರದಿಂದ ಮಾನ್ಯತೆ ಪಡೆದಿರುವಯಾವುದೇ ಶಾಲೆಯಲ್ಲಿ ೭ನೇ ತರಗತಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ, ೨೦೨೩ ಜುಲೈ ೧ಕ್ಕೆ ೧೧ ೧/೨  ರಿಂದ ೧೩ ವರ್ಷ ತುಂಬಿರುವ ಬಾಲಕ ಹಾಗೂ ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳು ೬೦೦ರೂ. ಹಾಗೂ ಎಸ್.ಸಿ. ಎಸ್.ಟಿ ಅಭ್ಯರ್ಥಿಗಳು ೫೫೫ರೂ. ಗಳನ್ನು ವೆಬ್‌ಸೈಟ್ ನಲ್ಲಿ ಆನ್‌ಲೈನ್ ಪಾವತಿ ಮಾಡುವ ಮೂಲಕ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಪಡೆಯ ಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ್, ನಂ.೫೮ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪರಸ್ತೆ, ಬೆಂಗಳೂರು-೨೫ ಇವರಿಗೆ ಸಲ್ಲಿಸಲು ಅ.೧೫ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೦-೨೫೫೮೯೪೫೯ ಅಥವಾ ಜಿಲ್ಲಾ ಸೈನಿಕ ಕಲ್ಯಾಣ ಮತ್ತು  ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತುತಿ ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News