×
Ad

ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ವಾಹನ ಹರಿಸಿ ಹತ್ಯೆ

Update: 2022-07-20 12:30 IST

ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಿನ್ನೆ ರಾತ್ರಿ ವಾಹನ ತಪಾಸಣೆ ವೇಳೆ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಸಾಯಿಸಿರುವ ಆಘಾತಕಾರಿ ಘಟನೆ ನಡೆದಿದೆ.

ಸಬ್ ಇನ್ಸ್‌ಪೆಕ್ಟರ್ ಸಂಧ್ಯಾ ಟೋಪ್ನೊ ಅವರನ್ನು ರಾಂಚಿಯ ಟುಪುಡಾನಾ ಔಟ್‌ಪೋಸ್ಟ್‌ನ ಉಸ್ತುವಾರಿಯಾಗಿ ನೇಮಿಸಲಾಗಿತ್ತು.

"ವಾಹನವೊಂದರಲ್ಲಿ  ದನಗಳನ್ನು ಸಾಗಿಸುತ್ತಿರುವ ಬಗ್ಗೆ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಗೆ ಮಾಹಿತಿ ಬಂದಿತ್ತು. ಅವರು ಅದನ್ನು ನಿಲ್ಲಿಸಲು ಪ್ರಯತ್ನಿಸಿದಾಗ, ಚಾಲಕ ಅವರ ಮೇಲೆ ವಾಹನ ಚಲಾಯಿಸಿದ್ದು,  ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಯಿತು ಸುದ್ದಿ ಸಂಸ್ಥೆ ANI ಯೊಂದಿಗೆ ಮಾತನಾಡಿದ ರಾಂಚಿಯ ಹಿರಿಯ ಪೊಲೀಸ್ ಅಧೀಕ್ಷಕ ಕೌಶಲ್ ಕಿಶೋರ್ ತಿಳಿಸಿದರು.

ಆರೋಪಿಯನ್ನು ಬಂಧಿಸಲಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹರ್ಯಾಣದ ನುಹ್‌ನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯನ್ನು ತನಿಖೆ ನಡೆಸುತ್ತಿದ್ದ  ಡಿಎಸ್‌ಪಿ ಶ್ರೇಣಿಯ ಅಧಿಕಾರಿಯೊಬ್ಬರ ಮೇಲೆ ಟ್ರಕ್ ಹರಿಸಿ ಹತ್ಯೆಗೈದಿರುವ ಕೆಲವೇ ಗಂಟೆಗಳ ನಂತರ ಈ ಘಟನೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News