×
Ad

ಎಲ್ಲಾ ಪ್ರಕರಣಗಳಲ್ಲಿ ಜಾಮೀನು ಪಡೆದ ಮುಹಮ್ಮದ್ ಝುಬೇರ್

Update: 2022-07-20 14:48 IST

ಹೊಸದಿಲ್ಲಿ: ಕಳೆದ ತಿಂಗಳು ಬಂಧಿತರಾಗಿದ್ದ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಝಬೇರ್ ತನ್ನ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದು, ಶೀಘ್ರವೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು NDTV ವರದಿ ಮಾಡಿದೆ.

ಝುಬೇರ್ ಅವರನ್ನು ಜೂನ್ 28 ರಂದು ದಿಲ್ಲಿ ಪೊಲೀಸರು 2018 ರ ಟ್ವೀಟ್ ಗೆ ಸಂಬಂಧಿಸಿ ಬಂಧಿಸಿದ್ದರು.

ಎಲ್ಲಾ ಎಫ್‌ಐಆರ್‌ಗಳಲ್ಲಿ ಝುಬೇರ್ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ನಾವು ಅಭಿಪ್ರಾಯಪಡುತ್ತೇವೆ. ಇದು ಕಾನೂನಿನ ಸ್ಥಾಪಕ ತತ್ವವಾಗಿದೆ. ಬಂಧನದ ಅಧಿಕಾರವನ್ನು ಮಿತವಾಗಿ ಅನುಸರಿಸಬೇಕು. ಪ್ರಸ್ತುತ ಪ್ರಕರಣದಲ್ಲಿ ಅವರನ್ನು ನಿರಂತರ ಬಂಧನದಲ್ಲಿ ಇರಿಸಲು ಮತ್ತು ಅಂತ್ಯವಿಲ್ಲದ ಶಿಕ್ಷೆಗೆ ಒಳಪಡಿಸಲು ಯಾವುದೇ ಸಮರ್ಥನೆ ಇಲ್ಲ  ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News