×
Ad

ಮುರುಡೇಶ್ವರ | ಮನೆಯಿಂದ 2.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

Update: 2022-07-20 16:07 IST

ಭಟ್ಕಳ, ಜು.20: ಮನೆಯಲ್ಲಿ ಯಾರು ಇಲ್ಲದ ವೇಳೆ ಮುಂಬಾಗಿಲು ಮುರಿದು 60 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವುಗೈದಿರುವ ಘಟನೆ ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮಾವಳ್ಳ-1ರ ಜನತಾ ಕಾಲನಿಯಲ್ಲಿ ನಡೆದಿರುವುದು ವರದಿಯಾಗಿದೆ.

ಇಲ್ಲಿನ ಮಾದೆವ ಈರಪ್ಪ ನಾಯ್ಕ ಎಂಬವರ ಮನೆಯಿಂದ ಈ ಕಳವು ನಡೆದಿದ್ದು, ಕಳವಾಗಿರುವ ಚಿನ್ನಾಭರಣಗಳ ಒಟ್ಟು ಮೌಲ್ಯ ಸುಮಾರು 2.80 ಲಕ್ಷ ರೂ. ಎಂದು ಅವರು ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News