×
Ad

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಕೆ.ಎಸ್.ಈಶ್ವರಪ್ಪಗೆ ಕ್ಲೀನ್ ಚಿಟ್

Update: 2022-07-20 18:43 IST

ಬೆಂಗಳೂರು, ಜು.20: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‍ಗೆ ಬಿ ರಿಪೋರ್ಟ್ ಸಲ್ಲಿಕೆಯಾಗಿದ್ದು, ಬಿಜೆಪಿ ಮುಖಂಡ, ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ಈ ಕೇಸ್‍ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.

ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಉಡುಪಿ ನಗರ ಠಾಣೆ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆದರೆ, ಕೋರ್ಟ್ ಇನ್ನೂ ಬಿ ರಿಪೋರ್ಟ್ ವರದಿಯನ್ನು ಅಂಗೀಕರಿಸಿಲ್ಲ. ಮುಂದಿನ ವಿಚಾರಣೆ ವೇಳೆ ಬಿ ರಿಪೋರ್ಟ್ ಕುರಿತು ದೂರುದಾರರಿಗೆ ಮಾಹಿತಿ ಒದಗಿಸಲಾಗುತ್ತದೆ. ಆಗ ದೂರುದಾರರು ಬಿ ರಿಪೋರ್ಟ್ ಅನ್ನು ಚಾಲೆಂಜ್ ಮಾಡಬಹುದು. ಸದ್ಯಕ್ಕೆ ಬಿ ರಿಪೋರ್ಟ್ ಸಲ್ಲಿಕೆಯಾಗಿದ್ದರಿಂದ ಪ್ರಕರಣದಲ್ಲಿ ಈಶ್ವರಪ್ಪಗೆ ಮೊದಲ ಹಂತದಲ್ಲಿ ರಿಲೀಫ್ ಸಿಕ್ಕಿದೆ.

ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್‍ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದ ತನಿಖೆ ನಡೆಸಿದ ಉಡುಪಿ ಎಸ್‍ಪಿ ಎನ್.ವಿಷ್ಣುವರ್ಧನ್ ಅವರು ಈಶ್ವರಪ್ಪ ವಿರುದ್ಧ ಸಾಕ್ಷಾಧಾರ ಕೊರತೆ ಇದೆ ಎಂದು ಕ್ಲೀನ್ ಚಿಟ್ ನೀಡಿದ್ದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‍ಗೆ ಬಿ ರಿಪಪೋರ್ಟ್ ಸಲ್ಲಿಸಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಬಳಿಕ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಶ್ವರಪ್ಪ ಇಲಾಖೆಯಲ್ಲಿ ಶೇ.40 ಕಮಿಷನ್ ಆರೋಪ ಕೇಳಿ ಬಂದಿತ್ತು. ಈಶ್ವರಪ್ಪ ಕಮಿಷನ್‍ಗಾಗಿ ಬಿಲ್ ಕೊಟ್ಟಿಲ್ಲ ಎಂದಿದ್ದ ಸಂತೋಷ್ ಆರೋಪಿಸಿದ್ದರು. ಈಶ್ವರಪ್ಪ ವಿರುದ್ಧ ಹೇಳಿಕೆ ಬೆನ್ನಲ್ಲೇ ಉಡುಪಿಯ ಶಾಂಭವಿ ಲಾಡ್ಜ್‍ನಲ್ಲಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದರು.

ಪ್ರಕರಣದ ತನಿಖೆ ಮುಗಿಸಿದ ಉಡುಪಿ ನಗರ ಪೊಲೀಸರು ಈಶ್ವರಪ್ಪಗೆ ಕ್ಲೀನ್‍ಚಿಟ್ ನೀಡಿದ್ದಾರೆ. ಆಡಿಯೋ, ವಿಡಿಯೋ, ಮೊಬೈಲ್, ಸಿಸಿಟಿವಿ ಪರಿಶೀಲನೆ ನಡೆಸಿ ತಾಂತ್ರಿಕ ಸಾಕ್ಷ್ಯ ಸಂಗ್ರಹಿಸಿ ಪೊಲೀಸರು ವರದಿ ಸಲ್ಲಿಸಿದ್ದಾರೆ.

ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರದರ್ಶಕ ತನಿಖೆಗೆ ಆಗ್ರಹಿಸಿ ಸಂತೋಷ ಕುಟುಂಬ ಸದಸ್ಯರು ರಾಜ್ಯಪಾಲರಿಗೆ ಪತ್ರ ಬರೆದು ಕೋರಿದ್ದರು. 

ಇದನ್ನೂ ಓದಿ... ಗುತ್ತಿಗೆದಾರ ಸಂತೋಷ್ ಸಾವು ಪ್ರಕರಣ: ತನಿಖೆ ಮೇಲೆ ಈಶ್ವರಪ್ಪ ಪ್ರಭಾವ ಆರೋಪಿಸಿ ರಾಜ್ಯಪಾಲರಿಗೆ ಮೃತನ ಪತ್ನಿ ಪತ್ರ

ಇದನ್ನೂ ಓದಿ...  ಸಂತೋಷ್ ಪಾಟೀಲ್ ಮೃತ್ಯು ಪ್ರಕರಣ; ಸಚಿವ ಈಶ್ವರಪ್ಪ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲು

ಇದನ್ನೂ ಓದಿ...   ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಘೋಷಣೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News