ಬಿಲ್‌ ಗೇಟ್ಸ್‌ ಹಿಂದಿಕ್ಕಿ ಜಗತ್ತಿನ ನಾಲ್ಕನೇ ಅತಿ ದೊಡ್ಡ ಶ್ರೀಮಂತನಾಗಿ ಹೊರಹೊಮ್ಮಿದ ಗೌತಮ್ ಅದಾನಿ

Update: 2022-07-20 14:07 GMT

ಹೊಸದಿಲ್ಲಿ: ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿ ಈಗ ಫೋರ್ಬ್ಸ್ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಫೋರ್ಬ್ಸ್‌ನ ರಿಯಲ್ ಟೈಮ್ ಬಿಲಿಯನೇರ್‌ಗಳ ಪಟ್ಟಿಯ ಪ್ರಕಾರ ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಅವರು ಮೈಕ್ರೋಸಾಫ್ಟ್ ಸಹಸಂಸ್ಥಾಪಕ ಬಿಲ್ ಗೇಟ್ಸ್‌ರನ್ನು ಹಿಂದಿಕ್ಕಿದ್ದಾರೆ. 

115.5 ಬಿಲಿಯನ್ ಡಾಲರ್‌ ನಿವ್ವಳ ಮೌಲ್ಯದೊಂದಿಗೆ ವಿಶ್ವದ 4ನೇ ಶ್ರೀಮಂತ ವ್ಯಕ್ತಿಯೆನಿಸಿಕೊಂಡಿರುವ ಅದಾನಿ ಸಂಪತ್ತಿನಲ್ಲಿ 2.9 ಶತಕೋಟಿ ಡಾಲರ್‌ಗಳಷ್ಟು ಏರಿಕೆ ಕಂಡು ಬಂದಿದೆ.  ಕಳೆದ ವಾರವಷ್ಟೇ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಲಾಭರಹಿತ ಸಂಸ್ಥೆ ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್‌ಗೆ ತಮ್ಮ ಸಂಪತ್ತಿನಿಂದ 20 ಬಿಲಿಯನ್ ಡಾಲರ್‌ ದೇಣಿಗೆಯನ್ನು ಘೋಷಿಸಿದ ಬಳಿಕ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಈ ಬದಲಾವಣೆ ಕಂಡು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News