ಕೈದಿಗಳ ಕೂಲಿ ಮೊತ್ತ ಹೆಚ್ಚಿಸಿ ಆದೇಶ ಹೊರಡಿಸಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

Update: 2022-07-20 15:05 GMT

ಬೆಂಗಳೂರು, ಜು.20: ರಾಜ್ಯದ ಕಾರಾಗೃಹಗಳಲ್ಲಿ ಸುಮಾರು 15 ಸಾವಿರ ಕೈದಿಗಳಿದ್ದಾರೆ. ಕೈದಿಗಳಿಗೆ ಕೂಲಿ ಮೊತ್ತವನ್ನು 200 ರೂ.ನಿಂದ ಸ್ವಲ್ಪ ಹೆಚ್ಚಳ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತು, ಈವರೆಗೆ ಆದೇಶ ಹೊರಡಿಸಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ಜೈಲಿನಲ್ಲಿ ಪ್ರತಿ ಕೈದಿಯೂ ಕೆಲಸ ಮಾಡಬೇಕಾಗುತ್ತದೆ. ವಿವಿಧ ಕೆಲಸಗಳ ಮೂಲಕ ಕೈದಿಗಳ ಖಿನ್ನತೆ ಹೋಗಲಾಡಿಸಿ ಅವರ ಮನಃಪರಿವರ್ತನೆ ಮಾಡುವುದು ಇದರ ಉದ್ದೇಶ. ಈ ಮೂಲಕ ಇಲಾಖೆಗೆ ಆದಾಯವೂ ಬರುತ್ತಿದೆ. ಕೈದಿಯಾದ ಮಾತ್ರಕ್ಕೆ ಅವರಿಂದ ಜೀತ ಮಾಡಿಸಿಕೊಳ್ಳುವ ಹಕ್ಕು ಯಾವ ಸರಕಾರಕ್ಕೂ ಇಲ್ಲ ಎಂದು ಅವರು ಹೇಳಿದ್ದಾರೆ.

ಈ ಕಾರಣಕ್ಕಾಗಿ ಅವರಿಂದಲೇ ಬರುತ್ತಿರುವ ಲಾಭ ಬಳಸಿ ಅವರಿಗೆ ಸ್ವಲ್ಪ ಕೂಲಿ ಹೆಚ್ಚಿಸುವ ಯೋಚನೆ ಮಾಡಲಾಗಿದೆ. ಆದರೆ ಈ ಬಗ್ಗೆ ತಪ್ಪು ಸಂದೇಶ ಹರಡುವುದು ಕಂಡುಬಂದಿದೆ.  ಈ ರೀತಿ ತಪ್ಪು ಸಂದೇಶ ಹರಡುವುದು ಸಮಾಜದ ಹಿತದೃಷ್ಟಿಯಿಂದ ಸರಿಯಲ್ಲ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News