ಲಂಕಾ ಅಧ್ಯಕ್ಷೀಯ ಚುನಾವಣೆ ಮೇಲೆ ಪ್ರಭಾವ: ವರದಿ ನಿರಾಕರಿಸಿದ ಭಾರತ

Update: 2022-07-20 16:42 GMT

ಕೊಲಂಬೊ, ಜು.20: ಶ್ರೀಲಂಕಾದ ಅಧ್ಯಕ್ಷರ ಹುದ್ದೆಗೆ ಸಂಸತ್ತಿನಲ್ಲಿ ನಡೆದ ಚುನಾವಣೆಗೆ ಸಂಬಂಧಿಸಿದಂತೆ ಶ್ರೀಲಂಕಾದ ನಾಯಕರ ಮೇಲೆ ಪ್ರಭಾವ ಬೀರಲು ಭಾರತ ರಾಜಕೀಯ ಮಟ್ಟದಲ್ಲಿ ಪ್ರಯತ್ನಗಳನ್ನು ನಡೆಸಿದೆ ಎಂಬ ವರದಿಯನ್ನು ಭಾರತ ಬುಧವಾರ ಸ್ಪಷ್ಟವಾಗಿ ನಿರಾಕರಿಸಿದೆ.

ಈ ಕುರಿತ ಆಧಾರರಹಿತ ಮತ್ತು ಸಂಪೂರ್ಣವಾಗಿ ಹುತಾತ್ಮಕ ಮಾಧ್ಯಮ ವರದಿಗಳನ್ನು ಗಮನಿಸಿದ್ದೇವೆ . ಈ ಕಲ್ಪಿತ ವರದಿಯನ್ನು ಸಂಪೂರ್ಣವಾಗಿ ತಳ್ಳಿಹಾಕುತ್ತೇವೆ . ಪ್ರಜಾಸತ್ತಾತ್ಮಕ ವಿಧಾನಗಳು ಮತ್ತು ಮೌಲ್ಯಗಳು, ಸ್ಥಾಪಿತ ಸಂಸ್ಥೆಗಳು ಮತ್ತು ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿ ಶ್ರೀಲಂಕಾದ ಜನರ ಆಕಾಂಕ್ಷೆಗಳ ಸಾಕ್ಷಾತ್ಕಾರಗಳನ್ನು ಭಾರತ ಬೆಂಬಲಿಸುತ್ತದೆ ಮತ್ತು ಇನ್ನೊಂದು ದೇಶದ ಆಂತರಿಕ ವ್ಯವಹಾರ ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬುದನ್ನು ಪುನರುಚ್ಚರಿಸುತ್ತೇವೆ ಎಂದು ಶ್ರೀಲಂಕಾದಲ್ಲಿನ ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದೆ.

ಬುಧವಾರ ನಡೆದ ಗುಪ್ತ ಮತದಾನದಲ್ಲಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಗೆಲುವು ಸಾಧಿಸಿದ್ದಾರೆ.

  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News