ಕೇರಳ: ತಾಯಿ, ಪುತ್ರಿ ಮೇಲೆ ಆ್ಯಸಿಡ್ ದಾಳಿ

Update: 2022-07-20 16:55 GMT

ತಿರುವನಂತಪುರ, ಜು. 20: ಗಡಿಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ತಾಯಿ ಹಾಗೂ ಆಕೆಯ ಪುತ್ರಿಯ ಮೇಲೆ ನೆರೆಯ ಮಹಿಳೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ತಿರುವನಂತಪುರದಲ್ಲಿ ನಡೆದಿದೆ. 

ಈ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಸಂತ್ರಸ್ತರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಹತ್ಯೆ ಯತ್ನದ ಸಂಬಂಧದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕಟ್ಟಕಡ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.  ಸಂತ್ರಸ್ತರ ಆರೋಗ್ಯ ಪ್ರಸ್ತುತ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ. ಆ್ಯಸಿಡ್ ದಾಳಿ ನಡೆಸಿದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News