ಮೇಕೆದಾಟು ಯೋಜನೆಗೆ ತಮಿಳುನಾಡು ತಕರಾರು ಪ್ರಕರಣದಲ್ಲಿ ನಮ್ಮ ಪರವಾಗಿ ತೀರ್ಪು ಬರಲಿದೆ: ಬೊಮ್ಮಾಯಿ ವಿಶ್ವಾಸ

Update: 2022-07-21 18:27 GMT

ಮಂಡ್ಯ, ಜು.20: ಮೇಕೆದಾಟು ಯೋಜನೆ ಸಂಬಂಧ ತಮಿಳುನಾಡು ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಿರುವ ಅರ್ಜಿ ಸಂಬಂಧ ನಮ್ಮ ವಕೀಲರು ಸಮರ್ಪಕವಾಗಿ ವಾದಮಂಡಿಸಿದ್ದಾರೆ. ಮಂಗಳವಾರ ಇತ್ಯರ್ಥಗೊಳ್ಳುವ ಸಾಧ್ಯತೆಯಿದ್ದು, ನಮ್ಮ ಪರವಾಗಿ ತೀರ್ಪು ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ಕೆಆರ್‍ಎಸ್‍ಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಕೋರ್ಟ್ ತೀರ್ಪು ಬಂದ ತಕ್ಷಣ ಡಿಪಿಆರ್ ಗೆ ಅನುಮೋದನೆ ಸಿಗಲಿದೆ. ತದನಂತರ ಯೋಜನೆಯನ್ನು ಆದಷ್ಟು ಬೇಗ ಅನುಷ್ಠಾನಗೊಳಿಸಲು ಸರಕಾರ ಎಲ್ಲಾ ರೀತಿಯ ಕ್ರಮವಹಿಸಲಿದೆ ಎಂದರು.

ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೂ ಅನುಕೂಲ ಇದೆ. ಆದರೆ, ಕೇವಲ ರಾಜಕಾರಣಕ್ಕೆ ತಮಿಳುನಾಡು ವಿರೋಧ ಮಾಡುತ್ತಿದೆ. ಈ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಈ ಬಗ್ಗೆ ಯಾವುದೇ ಅನುಮಾನ ಬೇಕಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಹಾಗೆಯೇ ಮಂಡ್ಯ ಜಿಲ್ಲೆಯ ನೊದೆಕೊಪ್ಪಲು, ಎಲೆಚಾಕನಹಳ್ಳಿ ಕೃಷಿ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳದಂತೆ ಇಲ್ಲಿನ ಶಾಸಕ ರವೀಂದ್ರ ಶ್ರೀಕಂಠಯ್ಯ ಮನವಿ ಮಾಡಿದ್ದಾರೆ. ಹೌದು ಕೃಷಿ ಭೂಮಿಯನ್ನು ಉಳಿಸಿಕೊಳ್ಳಬೇಕು. ಇಂದೇ ಆ ಕಡತವನ್ನು ತರಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಬೊಮ್ಮಾಯಿ ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News