ಎನ್ ಸಿಪಿಯ ಎಲ್ಲಾ ಘಟಕಗಳನ್ನು ವಿಸರ್ಜಿಸಿದ ಶರದ್ ಪವಾರ್

Update: 2022-07-21 04:37 GMT
Photo:PTI

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರು ತಮ್ಮ ರಾಜಕೀಯ ಪಕ್ಷದ ಎಲ್ಲಾ ವಿಭಾಗಗಳು ಹಾಗೂ  ಘಟಕಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಿದ್ದಾರೆ ಎಂದು ಎನ್‌ಸಿಪಿಯ ಹಿರಿಯ ನಾಯಕರೊಬ್ಬರು ಬುಧವಾರ ಹೇಳಿದ್ದಾರೆ.

ಎನ್‌ಸಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಫುಲ್ ಪಟೇಲ್ ಈ ಕುರಿತಂತೆ ಟ್ವೀಟ್ ಮಾಡಿ, "ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರ ಅನುಮೋದನೆಯೊಂದಿಗೆ, ಎಲ್ಲಾ ಇಲಾಖೆಗಳು ಹಾಗೂ  ಘಟಕಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಅಥವಾ ಎಂವಿಎ ಸರಕಾರದ ಪತನದ ಮೂರು ವಾರಗಳ ನಂತರ ತೆಗೆದುಕೊಂಡಿರುವ  ಈ ಹಠಾತ್ ಕ್ರಮಕ್ಕೆ ಮಾಜಿ ಕೇಂದ್ರ ಸಚಿವ ಪಟೇಲ್  ಯಾವುದೇ ಕಾರಣವನ್ನು ಬಹಿರಂಗಪಡಿಸಲಿಲ್ಲ.

ಎನ್‌ಸಿಪಿಯು ಶಿವಸೇನೆ ನೇತೃತ್ವದ ಸಮ್ಮಿಶ್ರ ಸರಕಾರದ ಪ್ರಮುಖ ಪಾಲುದಾರ ಪಕ್ಷವಾಗಿತ್ತು. ಜೂನ್ ಅಂತ್ಯದಲ್ಲಿ ಏಕನಾಥ ಶಿಂಧೆ ನೇತೃತ್ವದಲ್ಲಿ ಶಿವಸೇನೆ ಶಾಸಕರು ಉದ್ದವ್ ಠಾಕ್ರೆ ವಿರುದ್ದ ಬಂಡಾಯ ಎದ್ದ ಬಳಿಕ ಸಮ್ಮಿಶ್ರ ಸರಕಾರ ಪತನಗೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News