×
Ad

ಬೆಳ್ತಂಗಡಿ | ಬಾವಿಗೆ ಬಿದ್ದು ಯುವಕ ಮೃತ್ಯು

Update: 2022-07-21 10:30 IST

ಬೆಳ್ತಂಗಡಿ, ಜು.21: ಯುವಕನೋರ್ವ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯ ಕಲ್ಮಂಜದಲ್ಲಿ ನಡೆದಿರುವುದು ವರದಿಯಾಗಿದೆ.

ಕಲ್ಮಂಜ ಗ್ರಾಮದ ಆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ(35) ಮೃತಪಟ್ಟವರು.  

ಮೇಸ್ತ್ರಿ ಕೆಲಸ ಮಾಡುತ್ತಿದ್ದ ಕೃಷ್ಣಪ್ಪ ಪೂಜಾರಿ ಮಂಗಳವಾರ ರಾತ್ರಿ ಸುಮಾರು ಎಂಟು ಗಂಟೆಯ ವೇಳೆ ಮನೆಯಿಂದ ನಾಪತ್ತೆಯಾಗಿದ್ದರೆನ್ನಲಾಗಿದೆ. ಮನೆ ಮಂದಿ ಸುತ್ತಮುತ್ತ ಎಲ್ಲೆಡೆ ಹುಡುಕಾಟ ನಡೆಸಿದರೂ ಅವರು ಪತ್ತೆಯಾಗಿರಲಿಲ್ಲ. ಆದರೆ ಬುಧವಾರ ಸಂಜೆ ಅವರ ಮೃತದೇಹವು ಬಾವಿಯಲ್ಲಿ ತೇಲಾಡುತ್ತಿರುವುದು ಕಂಡುಬಂದಿದೆ. ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News