ರಾಜ್ಯಸಭಾ ಸದಸ್ಯರಾಗಿ ಡಾ.ವೀರೇಂದ್ರ ಹೆಗ್ಗಡೆ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ

Update: 2022-07-21 09:55 GMT

ಹೊಸದಿಲ್ಲಿ, ಜು.21: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರಾಜ್ಯಸಭಾ ಸದಸ್ಯರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಅವರು ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಇದಕ್ಕೂ ಮೊದಲು ಪ್ರಮಾಣ ವಚನ ಸ್ವೀಕರಿಸಲು ಸಂಸತ್ ಭವನಕ್ಕೆ ಆಗಮಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಪಿಯೂಶ್ ಗೋಯಲ್ ಅವರು ಹೂಗುಚ್ಚ ನೀಡಿ ಅಭಿನಂದಿಸಿದರು.

​ಪ್ರಮಾಣ ವಚನ ಸ್ವೀಕಾರದ ಬಳಿಕ ವೀರೇಂದ್ರ ಹೆಗ್ಗಡೆ ಹಾಗು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಕೃತಜ್ಞತೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಿ ಮೆಚ್ಚುಗೆಯ ಮಾತುಗಳನ್ನು ಆಡಿದರು.

ಡಾ.ಹೆಗ್ಗಡೆಯವರನ್ನು ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರಕಾರವು ಇತ್ತೀಚೆಗೆ ನಾಮನಿರ್ದೇಶನ ಮಾಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News