×
Ad

ಈಡಿ ಅಧಿಕಾರಿಗಳಿಂದ ಸೋನಿಯಾ ಗಾಂಧಿ ವಿಚಾರಣೆ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

Update: 2022-07-21 12:48 IST

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ(ಈಡಿ)  ಮುಂದೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ವಿಚಾರಣೆಗೆ ಹಾಜರಾಗಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ರಾಜಭವವ ಚಲೋ ರ್‍ಯಾಲಿ ಆಯೋಜಿಸಿದೆ.

ರ್‍ಯಾಲಿಗೆ ಫ್ರೀಡಂ ಪಾರ್ಕ್ ಬಳಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಆಗಮಿಸಿದ್ದಾರೆ. 

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಅಧಿಕಾರ ಯಾರಿಗೂ ಶಾಶ್ವತ ಅಲ್ಲ.  ಕೇಂದ್ರ ಸರ್ಕಾರ ಇಲ್ಲದ ಆರೋಪಗಳನ್ನು ಹೊರಿಸಿ ಕೇಂದ್ರೀಯ ಏಜೆನ್ಸಿಗಳಿಂದ ತನಿಖೆ ಮಾಡಿಸುವ ಮೂಲಕ ಅವುಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ, ಎಂದು ಹೇಳಿದ್ದಾರೆ. 

ಪ್ರತೀಭಟನಾ ಕಾರ್ಯಕ್ರಮದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಎಂ.ವೀರಪ್ಪ ಮೊಯ್ಲಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. 

ಮಾರ್ಗ ಬದಲಾವಣೆ ಸಾಧ್ಯತೆ;  ನಗರದಲ್ಲಿ ಬೃಹತ್ ಪ್ರತಿಭಟನೆ ಹಿನ್ನೆಲೆ ಬೆಳಗ್ಗೆ 9 ಗಂಟೆಯಿಂದಲೇ ವಾಹನ ಸಂಚಾರ ಮಾರ್ಗಗಳಲ್ಲಿ ಬದಲಾವಣೆಗಳಾಗಲಿದ್ದು, ಮೆಜೆಸ್ಟಿಕ್​ನಿಂದ ಬರುವ ವಾಹನಗಳು ಮೌರ್ಯ ಸರ್ಕಲ್, ಹಳೇ ಜೆಡಿಎಸ್ ಕಚೇರಿ, ರೇಸ್ ಕೋರ್ಸ್ ರಸ್ತೆ, ಸಿಐಡಿ ಜಂಕ್ಷನ್, ಮಹಾರಾಣಿ ಜಂಕ್ಷನ್, ಕೆ.ಆರ್ ಸರ್ಕಲ್ ಮೂಲಕ ಹೋಗುವಂತೆ ಸಿದ್ದತೆ ನಡೆಸಲಾಗಿದ್ದು, ಎಷ್ಟು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಾರೋ ಅದನ್ನು ನೋಡಿಕೊಂಡು ಸಂಚಾರ ಮಾರ್ಗದಲ್ಲಿ ಬದಲಾವಣೆಗಳು ಆಗಲಿವೆ. ಟ್ರಾಫಿಕ್ ಜಾಮ್ ಆಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಟ್ರಾಫಿಕ್ ಪೊಲೀಸರನ್ನು ನಿಯೋಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News