×
Ad

ವಿಟ್ಲ | ಬಲಿಪಗುಳಿಯ ಹಾಳೆ ತಟ್ಟೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂ. ನಷ್ಟ

Update: 2022-07-21 13:05 IST

ಬಂಟ್ವಾಳ, ಜು.21: ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್ ನಲ್ಲಿ ಗುರುವಾರ ಬೆಂಕಿ ಅವಘಡ ಸಂಭವಿಸಿದೆ.

ಕಟ್ಟಡದ ಮೇಲ್ಭಾಗದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಫ್ಯಾಕ್ಟರಿಯಿಂದ ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೊಲೀಸರು, ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಆದರೆ ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಕಟ್ಟಡದಲ್ಲಿದ್ದ ಹಲವು ಮೆಷಿನ್, ಮತ್ತು ಹಾಳೆತಟ್ಟೆಗಳು ಸುಟ್ಟು ಕರಕಲಾಗಿವೆ. ಇದರಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News