ಉತ್ತರ ಪ್ರದೇಶ ಸರಕಾರಕ್ಕೆ 600 ಕೋಟಿ ರೂ. ಮೌಲ್ಯದ ಆಸ್ತಿ ದಾನ ಮಾಡಿದ ಮೊರಾದಾಬಾದ್ ವೈದ್ಯ
ಲಕ್ನೊ: ಮೊರಾದಾಬಾದ್‌ನ ವೈದ್ಯ ಅರವಿಂದ್ ಗೋಯಲ್ ಅವರು ಬಡವರ ಸಹಾಯಕ್ಕಾಗಿ ಉತ್ತರ ಪ್ರದೇಶ ಸರಕಾರಕ್ಕೆ ತಮ್ಮ ಸಂಪೂರ್ಣ ಆಸ್ತಿಯನ್ನು ದಾನ ಮಾಡಿದ್ದಾರೆ.
ಗೋಯಲ್ ಅವರ ಇಡೀ ಆಸ್ತಿಯ ಮೌಲ್ಯ ಸುಮಾರು 600 ಕೋಟಿ ರೂ. ಆಗಿದೆ.
ಸುಮಾರು 25 ವರ್ಷಗಳ ಹಿಂದೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಆಸ್ತಿಯನ್ನು ದಾನ ಮಾಡಿದ ನಂತರ ಗೋಯಲ್ ಹೇಳಿದರು.
ಅರವಿಂದ್ ಕುಮಾರ್ ಗೋಯಲ್ ಅವರು ಲಾಕ್‌ಡೌನ್ ಸಮಯದಲ್ಲಿ ಮೊರಾದಾಬಾದ್‌ನ 50 ಹಳ್ಳಿಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಜನರಿಗೆ ಉಚಿತ ಸೌಲಭ್ಯಗಳನ್ನು ಒದಗಿಸಿದ್ದರು. ಅವರು ರಾಜ್ಯದಲ್ಲಿ ಬಡವರಿಗೆ ಉಚಿತ ಶಿಕ್ಷಣ ಹಾಗೂ ಉತ್ತಮ ಚಿಕಿತ್ಸೆಯನ್ನು ಕೂಡ ನೀಡಿದ್ದರು.
ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ರಾಷ್ಟ್ರಪತಿ ಪ್ರತಿಭಾ ದೇವಿ ಪಾಟೀಲ್ ಹಾಗೂ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರಿಂದ ಡಾ.ಗೋಯಲ್ ಗೌರವಿಸಲ್ಪಟ್ಟಿದ್ದಾರೆ.
ಪತ್ನಿ ರೇಣು ಗೋಯಲ್ ಹೊರತುಪಡಿಸಿ, ಅರವಿಂದ್ ಅವರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.