×
Ad

ಜಾರಿ ನಿರ್ದೇಶನಾಲಯಕ್ಕೆ ಕೆಲವು ಮನವಿ ಮಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

Update: 2022-07-21 13:38 IST
Photo:PTI

ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಈಡಿ)ದಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿಚಾರಣೆಯನ್ನು ಮಹಿಳಾ ಹೆಚ್ಚುವರಿ ನಿರ್ದೇಶಕಿ ಮೋನಿಕಾ ಶರ್ಮಾ ನೇತೃತ್ವದಲ್ಲಿ ಐವರು ಅಧಿಕಾರಿಗಳು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

75ರ ಹರೆಯದ ಸೋನಿಯಾ ಗಾಂಧಿ ಅವರು ವಿಚಾರಣೆ ವೇಳೆ ಸುಸ್ತಾದರೆ ವಿಶ್ರಾಂತಿ ಪಡೆಯಲು ಅವಕಾಶ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಅಧ್ಯಕ್ಷರು ಜಾರಿ ನಿರ್ದೇಶನಾಲಯಕ್ಕೆ ಕೆಲವು ಮನವಿಗಳನ್ನು ಮಾಡಿದ್ದಾರೆ ಎಂದು ವರದಿಯಾಗಿದೆ.

ಮಗಳು ಹಾಗೂ  ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಔಷಧಿಗಳನ್ನು ಇಟ್ಟುಕೊಂಡಿರುವುದರಿಂದ ಕಟ್ಟಡದಲ್ಲಿ ಉಳಿಯಲು ಆಕೆಗೆ ಅವಕಾಶ ನೀಡಬೇಕೆಂದು ಸೋನಿಯಾ ಕೇಳಿಕೊಂಡಿದ್ದಾರೆ. ಅಲ್ಲದೆ, ತನ್ನೊಂದಿಗೆ ಸಂವಹನ ನಡೆಸುವ ಅಧಿಕಾರಿಗಳು ಹಾಗೂ  ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಅವರು ಕೋರಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದಲ್ಲಿ ರಾಹುಲ್ ಗಾಂಧಿಯವರ ವಿಚಾರಣೆಯು ಐದು ದಿನಗಳ ಕಾಲ ನಡೆಯಿತು. ಆದರೆ ಮೂಲಗಳು ಹೇಳುವಂತೆ ಜಾರಿ ನಿರ್ದೇಶನಾಲಯವು ಸೋನಿಯಾ ಗಾಂಧಿ ಅವರನ್ನು ಅಷ್ಟು ದಿನ ವಿಚಾರಣೆ ಮಾಡದಿರಲು ಯೋಜಿಸಿದೆ.

ರಾಹುಲ್ ಗಾಂಧಿ ಅವರ ಉತ್ತರಗಳು ಹೊಂದಿಕೆಯಾಗದ ಕಾರಣ ಅವರ ವಿಚಾರಣೆಗೆ ಹೆಚ್ಚು ಸಮಯ ತೆಗೆದುಕೊಂಡಿತು ಎಂದು ಜಾರಿ ನಿರ್ದೇಶನಾಲಯ ಹೇಳಿಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News