ರಾಜ್ಯಗಳಿಂದ ಮಾಹಿತಿ ಸಂಗ್ರಹಿಸುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶ

Update: 2022-07-21 17:03 GMT

ಹೊಸದಿಲ್ಲಿ,ಜು.21: ದ್ವೇಷ ಭಾಷಣ ಪ್ರಕರಣಗಳನ್ನು ತಡೆಯಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಅವುಗಳಿಂದ ಮಾಹಿತಿಗಳನ್ನು ಸಂಗ್ರಹಿಸುವಂತೆ ಸರ್ವೋಚ್ಚ ನ್ಯಾಯಾಲಯವು ಗುರುವಾರ ಕೇಂದ್ರಕ್ಕೆ ನಿರ್ದೇಶ ನೀಡಿದೆ.

ಸರ್ವೋಚ್ಚ ನ್ಯಾಯಾಲಯದ ಕೆಲವು ತೀರ್ಪುಗಳಲ್ಲಿ ದ್ವೇಷ ಭಾಷಣ ಪ್ರಕರಣಗಳನ್ನು ತಡೆಯುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಗಳನ್ನು ನೀಡಲಾಗಿತ್ತು. ಅವುಗಳನ್ನು ಪಾಲಿಸಲಾಗಿದೆಯೇ ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲು ಮಾಹಿತಿಗಳ ಸಂಕಲನವು ನೆರವಾಗುತ್ತದೆ ಎಂದು ನ್ಯಾಯಮೂರ್ತಿಗಳಾದ ಎ.ಎಂ.ಖನ್ವಿಲ್ಕರ್,ಎ.ಎಸ್.ಓಕಾ ಮತ್ತು ಜೆ.ಬಿ.ಪರ್ಡಿವಾಲಾ ಅವರನ್ನೊಳಗೊಂಡ ಪೀಠವು ತಿಳಿಸಿತು.

ಸಂಗ್ರಹಿಸಿದ ಮಾಹಿತಿಗಳನ್ನು ಆರು ವಾರಗಳಲ್ಲಿ ಕೈಪಿಡಿಯ ರೂಪದಲ್ಲಿ ಪೀಠದ ಮುಂದೆ ಸಲ್ಲಿಸುವಂತೆ ನ್ಯಾಯಾಧೀಶರು ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿಗಳಿಗೆ ನಿರ್ದೇಶ ನೀಡಿದರು.

ದ್ವೇಷ ಭಾಷಣಗಳು ಮತ್ತು ವದಂತಿ ಹರಡುವಿಕೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ಸಂದರ್ಭ ಸರ್ವೋಚ್ಚ ನ್ಯಾಯಾಲಯವು ಈ ಆದೇಶವನ್ನು ಹೊರಡಿಸಿತು.

ಕಳೆದ ವರ್ಷದ ಆ.8ರಂದು ದಿಲ್ಲಿಯ ಜಂತರ್‌ಮಂತರ್‌ನಲ್ಲಿ ಹಿಂದುತ್ವ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಮರ ವಿರುದ್ಧ ಪ್ರಚೋದನಾಕಾರಿ ಘೋಷಣೆಗಳಿಗೆ ಸಂಬಂಧಿಸಿದ ಅರ್ಜಿಯು ಇವುಗಳಲ್ಲಿ ಸೇರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News