ಬಿ.ಎಸ್. ಯಡಿಯೂರಪ್ಪ ವಿರುದ್ಧದ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ

Update: 2022-07-22 16:14 GMT

ಬೆಂಗಳೂರು, ಜು. 22: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣಗಲ ಕ್ರಿಮಿನಲ್ ಕಲಾಪಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

ಜಮೀನು ಹಂಚಿಕೆ ಹಗರಣವೊಂದರಲ್ಲಿ ಆರೋಪಿಯಾಗಿರುವ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು.

ಯಡಿಯೂರಪ್ಪ 2006-07ರಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿಯಾಗಿದ್ದಾಗ ಎಕರೆಗಟ್ಟಳೆ ಜಮೀನನ್ನು ಅಕ್ರಮವಾಗಿ ಡೀನೋಟಿಫೈ ಮಾಡಿದ್ದರು ಎಂದು ಆರೋಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News