4 ಕೋಟಿ ಅರ್ಹ ಭಾರತೀಯರು ಇನ್ನೂ ಕೋವಿಡ್ ಲಸಿಕೆ ಪಡೆದಿಲ್ಲ!

Update: 2022-07-23 02:23 GMT
ಸಾಂದರ್ಭಿಕ ಚಿತ್ರ (PTI)

ಹೊಸದಿಲ್ಲಿ: ದೇಶದಲ್ಲಿ ಬೂಸ್ಟರ್ ಡೋಸ್ ಸೇರಿದಂತೆ ಕೋವಿಡ್-19 ಲಸಿಕೆ ಸಂಪೂರ್ಣವಾಗಿ ಉಚಿತವಾಗಿದ್ದರೂ, ಲಸಿಕೆ ಪಡೆಯಲು ಅರ್ಹ ವಯೋಮಾನದ ನಾಲ್ಕು ಕೋಟಿ ಮಂದಿ ಇನ್ನೂ ಕೋವಿಡ್ ವಿರುದ್ಧ ಲಸಿಕೆ ಪಡೆದಿಲ್ಲ.

"ಜುಲೈ 18ರ ವೇಳೆಗೆ ಅಂದಾಜು 4 ಕೋಟಿ ಅರ್ಹ ಫಲಾನುಭವಿಗಳು ಕೋವಿಡ್ ಲಸಿಕೆಯ ಒಂದು ಡೋಸ್ ಕೂಡಾ ಪಡೆದಿಲ್ಲ" ಎಂದು ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪ್ರವಾರ್ ಶುಕ್ರವಾರ ಲೋಕಸಭೆಗೆ ತಿಳಿಸಿದ್ದಾರೆ.

ದೇಶದಲ್ಲಿ ಇದುವರೆಗೆ ಒಟ್ಟು 201 ಕೋಟಿ ಡೋಸ್‍ಗಳನ್ನು ನೀಡಲಾಗಿದ್ದು, ಈ ಪೈಕಿ ಶೇಕಡ 97ಕ್ಕಿಂತಲೂ ಅಧಿಕ ಪಾಲನ್ನು ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗಿದೆ. ಎಲ್ಲ ಅರ್ಹ ವಯಸ್ಕರಿಗೆ ಉಚಿತವಾಗಿ ಬೂಸ್ಟರ್ ಡೋಸ್ ನೀಡಿಕೆಯನ್ನೂ ಆರಂಭಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಇದುವರೆಗೆ 6.77 ಕೋಟಿ ಬೂಸ್ಟರ್ ಡೋಸ್‍ಗಳನ್ನು ದೇಶಾದ್ಯಂತ ನೀಡಲಾಗಿದೆ. ಈ ವಿಶೇಷ ಅಭಿಯಾನಕ್ಕೆ ಮುನ್ನ ಬೂಸ್ಟರ್ ಡೊಸ್‍ಗಳು ಆರೋಗ್ಯ ಕಾರ್ಯಕರ್ತರಿಗೆ, ಮುಂಚೂಣಿ ಕಾರ್ಯಕರ್ತರಿಗೆ ಮತ್ತು 60 ವರ್ಷ ಮೇಲ್ಪಟ್ ಎಲ್ಲ ಫಲಾನುಭವಿಗಳಿಗೆ ಉಚಿತವಾಗಿತ್ತು. ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಭಾರತದ ವಯಸ್ಕ ಜನಸಂಖ್ಯೆಯಲ್ಲಿ ಶೇಕಡ 98 ಮಂದಿ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News