ಮಂಗಳೂರು ವಿವಿ ಮಟ್ಟದ ಟೆನ್ನಿಸ್ ಪಂದ್ಯಾವಳಿ: ಉಜಿರೆ ಎಸ್‌ಡಿಎಂ ಚಾಂಪಿಯನ್
ಉಡುಪಿ : ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಟೆನ್ನಿಸ್ ಪಂದ್ಯದಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಹಾಗೂ ಮಹಿಳಾ ತಂಡಗಳು ಚಾಂಪಿಯನ್ ಆಗಿ ಮೂಡಿಬಂದಿವೆ.
ಪುರುಷರ ವಿಭಾಗದಲ್ಲಿ ರನ್ನರ್ ಅಪ್ ಪ್ರಶಸ್ತಿಯನ್ನು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು, ತೃತೀಯ ಸ್ಥಾನವನ್ನು ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು, ಚತುರ್ಥ ಸ್ಥಾನವನ್ನು ಬ್ರಹ್ಮಾವರ ಎಸ್‌ಎಂಎಸ್ ಕಾಲೇಜು ಹಾಗೂ ಮಹಿಳಾ ವಿಭಾಗದಲ್ಲಿ ರನ್ನರ್ ಅಪ್ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು, ತೃತೀಯ ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜು, ಚತುರ್ಥ ಸ್ಥಾನವನ್ನು ವಾಮದ ಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು ಪಡೆದುಕೊಂಡಿದೆ.
ಸಮಾರೋಪ ಸಮಾರಂಭದ ಮುಖ್ಯಅತಿಥಿಗಳಾಗಿ ಮಂಗಳೂರು ವಿವಿ ರಿಜಿಸ್ಟಾರ್ ಡಾ.ಕಿಶೋರ್ ಕುಮಾರ್, ಡಾ.ವಿನೋದ್ ಹೆಗಡೆ, ಬಿಜು ಜಾಕೋಬ್, ಟೆನ್ನಿಸ್ ತರಬೇತಿದಾರ ನಿಖಿಲ್ ಶುಭಹಾರೈಸಿದರು. ಅಧ್ಯಕ್ಷತೆ ಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಾಮಚಂದ್ರ ಅಡಿಗ ವಹಿಸಿದ್ದರು. ಡಾ.ರಾಮಚಂದ್ರ ಪಾಟ್ಕರ್ ವಂದಿಸಿದರು. ಡಾ.ರಾಜೇಂದ್ರ ಕೆ. ಕಾರ್ಯಕ್ರಮ ನಿರೂಪಿಸಿದರು.