ರಸ್ತೆ ಅಪಘಾತದಲ್ಲಿ ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಸಚಿವ ಗೋಪಾಲಯ್ಯ
ಹಾಸನ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರನ್ನು ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಮ್ಮ ಅಂಗರಕ್ಷಕರ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಘಟನೆ ರವಿವಾರ ಮಧ್ಯಾಹ್ನ ನಗರದ ಹೊರವಲಯದಲ್ಲಿ ನಡೆದಿದೆ.
ಹಾಸನ ಭೇಟಿಗಾಗಿ ಸಚಿವರು ಸರ್ಕಾರಿ ವಾಹನದಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಹಾಸನ ಬೈಪಾಸ್ ರಸ್ತೆಯಲ್ಲಿ ದ್ವಿಚಕ್ರವಾಹನಕ್ಕೆ ಅಪರಿಚಿತ ಕಾರು ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು.
ಇದನ್ನು ಗಮನಿಸಿದ ಸಚಿವ ಕೆ. ಗೋಪಾಲಯ್ಯ ಅವರು ಕೂಡಲೇ ಕಾರಿನಿಂದ ಇಳಿದು ಬಂದು ಯುವಕರಿಬ್ಬರನ್ನೂ ತಮ್ಮ ಅಂಗರಕ್ಷಕರ ವಾಹನದಲ್ಲಿ ಹಾಸನ ಜಿಲ್ಲಾ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದದು. ಘಟನಾ ಸ್ಥಳದಲ್ಲಿ ನೆರೆದಿದ್ದ ನೂರಾರು ಜನರು ಸಚಿವರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಹಾಸನ ಬೈಪಾಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿದ್ದು, ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡು ಬಿದ್ದಿದ್ದರು.
— K Gopalaiah (@GopalaiahK) July 24, 2022
ಹಾಸನ ಪ್ರಯಾಣದ ಮಾರ್ಗ ಮಧ್ಯೆ ಇದನ್ನು ನೋಡಿದ್ದು, ಕೂಡಲೇ ಅಂಗರಕ್ಷಕರ ವಾಹನದಲ್ಲಿ ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು.
ಇಂತಹ ಸಂದರ್ಭದಲ್ಲಿ ಗಾಯಾಳುಗಳಿಗೆ ನೆರವಾಗಿ ಎಂದು ವಿನಂತಿ.@BSBommai pic.twitter.com/g3CmBUpFyL