×
Ad

​ಬಿಜೆಪಿ ಮುಖ್ಯಮಂತ್ರಿಗಳ ಮಂಡಳಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿ

Update: 2022-07-24 22:38 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (File Photo)

ಹೊಸದಿಲ್ಲಿ: ಬಿಜೆಪಿ ಮುಖ್ಯಮಂತ್ರಿಗಳ ಮಂಡಳಿ ಸಭೆಯಲ್ಲಿ ಯೋಜನೆಗಳ ಅನುಷ್ಠಾನದಲ್ಲಿ ಮುಂದಿರುವ ರಾಜ್ಯಗಳು ತಮ್ಮ ವಿಚಾರ ವಿನಿಮಯ ಮಾಡುತ್ತಾರೆ. ರಾಜ್ಯದ ಯೋಜನೆಗಳಾದ ಐಟಿಐಗಳ ಮೇಲ್ದರ್ಜೆಗೇರಿಸಿರುವುದು, ಕಿಸಾನ್ ಸಮ್ಮಾನ್ , 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಲು ಕೈಗೊಂಡಿರುವ ಕ್ರಮಗಳು, ನೂತನ ಶಿಕ್ಷಣ ನೀತಿ ಬಗ್ಗೆ ಚರ್ಚಿಸಲಾಯಿತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹೊಸದಿಲ್ಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ಮುಖ್ಯಮಂತ್ರಿಗಳ ಮಂಡಳಿ ಸಭೆ ನಿಯಮಿತವಾಗಿ ನಡೆಯುತ್ತದೆ. ದೇಶದ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಚರ್ಚೆಯಾಗುತ್ತದೆ. ವಿಶೇಷವಾಗಿ ಕೇಂದ್ರ ಪ್ರಾಯೋಜಿತ ಯೋಜನೆಗಳ ಬಗ್ಗೆ ಪ್ರಧಾನಮಂತ್ರಿಗಳು ಪರಿಶೀಲಿಸಿ, ಮಾರ್ಗದರ್ಶನ ನೀಡಿದ್ದಾರೆ. ಅಕ್ಟೋಬರ್ ನಲ್ಲಿ ಮುಂದಿನ ಸಭೆ ನಡೆಯಲಿದೆ ಎಂದರು.

ನಾಳೆ ಬೆಳಿಗ್ಗೆ ರಾಷ್ಟ್ರಪತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ನಂತರ ಕ್ರೀಡಾ ಮಂತ್ರಿಗಳನ್ನು ಭೇಟಿಯಾಗುತ್ತಿದ್ದೇನೆ. ಕೇಂದ್ರ ಸಚಿವ ರಾದ ಪಿಯೂಷ್ ಗೋಯಲ್ ಹಾಗೂ ಸಂಜೆ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗುತ್ತಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News