3 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕನಿಂದ ಅತ್ಯಾಚಾರ

Update: 2022-07-24 17:11 GMT

ಗೊಂಡ (ಉ.ಪ್ರ.), ಜು.24: ಉತ್ತರಪ್ರದೇಶದ ವಝೀರ್ ಗಂಜ್ ಪ್ರದೇಶದ ಗ್ರಾಮವೊಂದರಲ್ಲಿ   ಮೂರು ವರ್ಷ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಹದಿಹರೆಯದ ಬಾಲಕನೊಬ್ಬ ಅತ್ಯಾಚಾರವೆಸಗಿದ್ದಾನೆಂದು  ಪೊಲೀಸರು ರವಿವಾರ ತಿಳಿಸಿದ್ದಾರೆ.

೧೩ ವರ್ಷದ ಬಾಲಕನು, ಬಾಲಕಿಯನ್ನು ಶನಿವಾರ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು, ಅಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಬಾಲಕನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದ್ದು, ಅಲ್ಲಿಂದ ಆತನನ್ನು ಬಾಲಾಪರಾಧಿಗಳ ಪುನಶ್ಚೇತನ ಕೇಂದ್ರಕ್ಕೆ ಕೊಂಡೊಯ್ಯಲಾಗಿದೆಯೆಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವರಾಜ್ ತಿಳಿಸಿದ್ದಾರೆ. ವೈದ್ಯಕೀಯ ತಪಾಸಣೆಗಾಗಿ ಬಾಲಕಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆಯೆಂದು   ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News