15ನೇ ರಾಷ್ಟ್ರಪತಿ ಆಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

Update: 2022-07-25 04:59 GMT

ಹೊಸದಿಲ್ಲಿ:  ದ್ರೌಪದಿ ಮುರ್ಮು ಅವರು ಸೋಮವಾರ ಬೆಳಗ್ಗೆ ಸಂಸತ್  ಭವನದ  ಸೆಂಟ್ರಲ್ ಹಾಲ್ ನಲ್ಲಿ  ದೇಶದ 15ನೇ ರಾಷ್ಟ್ರಪತಿ ಆಗಿ ಪ್ರಮಾಣಚನ ಸ್ವೀಕರಿಸಿದರು. ಭಾರತದ ಮುಖ್ಯ  ನ್ಯಾಯಮೂರ್ತಿ ಎನ್.ವಿ. ರಮಣ ಅವರು ಮುರ್ಮು ಅವರಿಗೆ ಪ್ರಮಾಣವಚನ ಬೋಧಿಸಿದರು.

ದೇಶದ ಘನತೆವೆತ್ತ ಹುದ್ದೆ ಅಲಂಕರಿಸಿದ ಮೊದಲ ಬುಡಕಟ್ಟು ಸಮುದಾಯದ ಮಹಿಳೆಯಾಗಿರುವ  ಮುರ್ಮು ಅವರು  ಪ್ರತಿಭಾ ಪಾಟೀಲ್ ಬಳಿಕ ರಾಷ್ಟ್ರಪತಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ದೇಶದ ಎರಡನೇ ಮಹಿಳೆ ಆಗಿದ್ದಾರೆ.

ರಾಷ್ಟ್ರಪತಿಯಾಗಿ ಅಧಿಕಾರವಹಿಸಿಕೊಳ್ಳುವ ಮೊದಲು ಮುರ್ಮು ಅವರು ರಾಜ್ ಘಾಟ್ ಗೆ ಭೇಟಿ ನೀಡಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು.

ಮುರ್ಮು ಅವರು ನಿರ್ಗಮನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಅವರ ಪತ್ನಿ ಸವಿತಾ ಕೋವಿಂದ್ ಅವರನ್ನು ಭೇಟಿಯಾದರು.

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್, ನಿರ್ಗಮನ ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ಲೋಕಸಭಾ ಸ್ವೀಕರ್ ಓಂ ಬಿರ್ಲಾ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಸಚಿವರುಗಳು, ರಾಜ್ಯಪಾಲರುಗಳು, ಮುಖ್ಯಮಂತ್ರಿಗಳು,ಎಲ್ಲ ಪಕ್ಷದ ಸಂಸದರು ಸೇರಿದಂತೆ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News