ನೆಲ್ಯಹುದಿಕೇರಿ | ವಿದ್ಯುತ್ ತಂತಿ ಸ್ಪರ್ಶಗೊಂಡು ಎರಡು ಕಾಡಾನೆ ಸಾವು
Update: 2022-07-25 12:02 IST
ಮಡಿಕೇರಿ ಜು.25 : ವಿದ್ಯುತ್ ತಂತಿ ಸ್ಪರ್ಶಗೊಂಡು ಎರಡು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ನೆಲ್ಯಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ಅತ್ತಿಮಂಗಲದ ಕಾಫಿ ತೋಟದಲ್ಲಿ ನಡೆದಿದೆ.
ಒಂದು ಗಂಡಾನೆ, ಮತ್ತೊಂದು ಹೆಣ್ಣಾನೆ ಅಸುನೀಗಿದೆ. 11 ಕೆವಿ ವಿದ್ಯುತ್ ತಂತಿ ಕೆಳಭಾಗದಲ್ಲಿ ಹಾದು ಹೋಗಿರುವುದರಿಂದ ಈ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.