×
Ad

ಮುಂಬೈ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ವಿಕ್ಕಿ ಕೌಶಲ್, ಕತ್ರಿನಾ ಕೈಫ್

Update: 2022-07-25 13:13 IST
Photo:twitter

ಮುಂಬೈ: ನನಗೆ ಸಾಮಾಜಿಕ ಮಾಧ್ಯಮದಲ್ಲಿ ಜೀವ ಬೆದರಿಕೆ ಬಂದಿದೆ ಹಾಗೂ  ಅದೇ ವ್ಯಕ್ತಿ ತನ್ನ ಪತ್ನಿ ನಟಿ ಕತ್ರಿನಾ ಕೈಫ್ ಅವರನ್ನು ಆನ್‌ಲೈನ್‌ನಲ್ಲಿ ಹಿಂಬಾಲಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಬಾಲಿವುಡ್ ನಟ ವಿಕ್ಕಿ ಕೌಶಲ್ ಮುಂಬೈನ ಸಾಂತಾಕ್ರೂಝ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

 ದೂರಿನ ಆಧಾರದ ಮೇಲೆ  ಸಾಂತಾಕ್ರೂಝ್ ಪೊಲೀಸರು ಸೋಮವಾರ ಎಫ್‌ಐಆರ್ ದಾಖಲಿಸಿದ್ದಾರೆ ಪೊಲೀಸ್ ಇಲಾಖೆಯ ಸೈಬರ್ ತಂಡ ಆರೋಪಿಯನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದೆ.

 “ಅವರು (ಕೌಶಲ್) ಸಾಂತಾಕ್ರೂಝ್  ಪೊಲೀಸ್ ಠಾಣೆಗೆ ಬಂದಿದ್ದು, ಒಬ್ಬ ವ್ಯಕ್ತಿ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬೆದರಿಕೆ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದಾನೆ ಎಂದು ದೂರು ನೀಡಿದ್ದಾರೆ’’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

 “ನನಗೆ ಜೀವ ಬೆದರಿಕೆ ಹಾಕಿರುವ ವ್ಯಕ್ತಿಯು  ತನ್ನ ಪತ್ನಿಯನ್ನು (ಕತ್ರಿನಾ ಕೈಫ್) ಹಿಂಬಾಲಿಸುತ್ತಿದ್ದು ಆಕೆಗೂ ಬೆದರಿಕೆ ಹಾಕಿದ್ದಾನೆ’’ ಎಂದು ಕೌಶಲ್ ದೂರಿನಲ್ಲಿ ತಿಳಿಸಿದ್ದಾರೆಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ  ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506(2) (ಕೊಲೆ ಬೆದರಿಕೆ) ಹಾಗೂ  354-ಡಿ (ಹಿಂಬಾಲಿಸುವುದು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.  ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಸ್ತುಗಳನ್ನು ಪ್ರಕಟಿಸಿದ್ದಕ್ಕೆ ಅಥವಾ ರವಾನಿಸಿದ್ದಕ್ಕೆ ಶಿಕ್ಷೆ) ಅಡಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News