ಜು.30ರಂದು ಸಿಇಟಿ ಫಲಿತಾಂಶ ಪ್ರಕಟ: ಸಚಿವ ಡಾ.ಅಶ್ವತ್ಥ ನಾರಾಯಣ

Update: 2022-07-25 08:48 GMT

ಬೆಂಗಳೂರು, ಜು.25: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಜು. 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಸೋಮವಾರ ಈ ವಿಚಾರ ತಿಳಿಸಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿತ್ತು ಎಂದರು.

ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಇ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ಮಂಗಳವಾರ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News