ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಹಾವಳಿ: ಕ್ರಮದ ಬಗ್ಗೆ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

Update: 2022-07-25 12:59 GMT

ಬೆಂಗಳೂರು, ಜು.25: ಬೆಂಗಳೂರಿನಲ್ಲಿ ಬ್ಯಾನರ್, ಫ್ಲೆಕ್ಸ್‍ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸುವುದಕ್ಕೆ ನಿಷೇಧ ವಿಧಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸಿ ಎಂದು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತು ಸಾಮಾಜಿಕ ಕಾರ್ಯಕರ್ತ ಸಾಯಿ ದತ್ತ ಹಾಗೂ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ. 

ಅರ್ಜಿದಾರರ ಪರ ವಾದಿಸಿದ ವಕೀಲರು, ಬ್ಯಾನರ್, ಫ್ಲೆಕ್ಸ್ ಗಳನ್ನು ಮತ್ತೆ ಅಳವಡಿಸಲಾಗುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸಾರ್ವಜನಿಕ ಹಿತದೃಷ್ಟಿಯಿಂದ ಕೋರ್ಟ್ ಈ ಬಗ್ಗೆ ಗಮನಹರಿಸಲಿದೆ. ಹೀಗಾಗಿ, ಈ ಪ್ರಕರಣದಲ್ಲಿ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ಅವರನ್ನು ಅಮಿಕಸ್ ಕ್ಯೂರಿ ಆಗಿ ನೇಮಕ ಮಾಡಲಾಗುವುದು ಎಂದು ನ್ಯಾಯಪೀಠ ಆದೇಶಿಸಿತು. ಅರ್ಜಿದಾರರ ಆಕ್ಷೇಪಣೆಗೆ ಸಂಬಂಧಿಸಿದಂತೆ ಸಮಗ್ರ ವರದಿ ಸಲ್ಲಿಸಲು ಬಿಬಿಎಂಪಿಗೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News