ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ: ವಿವಿಧ ಸಂಘಟನೆಗಳಿಂದ ಜು.27ರಂದು ಸಕಲೇಶಪುರ ತಾಲೂಕು ಬಂದ್ ಗೆ ಕರೆ

Update: 2022-07-25 13:09 GMT

ಹಾಸನ : ಜು,  25: ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಜು.27 ರಂದು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಕಲೇಶಪುರ ತಾಲೂಕು ಬಂದ್ ಗೆ ಕರೆ ನೀಡಲಾಗಿದೆ ಎಂದು ಸಕಲೇಶಪುರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ ಭಾಸ್ಕರ್ ತಿಳಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಜಿಲ್ಲೆಯ ಪಶ್ಚಿಮ ಘಟ್ಟದ ಪ್ರದೇಶದಲ್ಲಿ ವಾಸಿಸುತ್ತಿರುವ ನಿವಾಸಿಗಳ ಬದುಕಿಗೆ ಮಾರಕವಾಗಿದೆ ಕೂಡಲೇ ಸರ್ಕಾರ ವರದಿ ಜಾರಿಗೊಳಿಸುವ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರಕಾರದ ಅಧಿಸೂಚನೆಯ ಅನ್ವಯ ಪಶ್ಚಿಮ ಘಟ್ಟ ಪ್ರದೇಶಕ್ಕೆ ಒಳಪಡುವ ಸಕಲೇಶಪುರ ತಾಲ್ಲೂಕಿನ ಅನೇಕ ಹಳ್ಳಿಗಳ ಜನರು ಆತಂಕಗೊಂಡಿದ್ದು ಜನಪರವಾಗಿ ಇರಬೇಕಿದ್ದ ಸರಕಾರ ಜನರಿಗೆ ಮಾರಕವಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ಸಿ ಸಣ್ಣ ಸ್ವಾಮಿ ಮಾತನಾಡಿ, ಬಿಜೆಪಿ ಸರಕಾರ ಸಕಲೇಶಪುರ ಭಾಗದ ಯಾವುದೇ ಸಮಸ್ಯೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಅತಿವೃಷ್ಟಿಯಿಂದ ಕಾಫಿ ಸೇರಿದಂತೆ ವಿವಿಧ ಬೆಳೆಗಳು ನೆಲ ಕಚ್ಚಿವೆ ಇದಕ್ಕೆ ಪರಿಹಾರ ನೀಡುವ ನೀಡುವ ನಿಟ್ಟಿನಲ್ಲಿ ಕ್ರಮ ವಹಿಸದೆ ಇರುವುದು ದೌರ್ಭಾಗ್ಯ ಎಂದರು.

ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೊಲ್ಲ ಹಳ್ಳಿ ಸಲೀಂ, ಜಿಲ್ಲಾ ಸಾಮಾಜಿಕ ಜಾಲ ತಾಣದ ಹೆನ್ರಿ ಕಾಕನಮನೆ, ಬಿ.ಕೆ ಮಹೇಶ್, ಸೇರಿದಂತೆ ಇತರರು ಹಾಜರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News