×
Ad

ಪ್ಲಾಸ್ಟಿಕ್ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಸೂಚನೆ

Update: 2022-07-25 21:03 IST

ಮಂಗಳೂರು: ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಿರುವ ಹಿನ್ನಲೆಯಲ್ಲಿ 2016ರಲ್ಲಿ ರಾಜ್ಯ ಸರಕಾರ  ಹೊರಡಿಸಿದ ಅಧಿಸೂಚನೆ ಹಾಗೂ 2021ರಲ್ಲಿ ಕೇಂದ್ರ ಸರಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಚಾಚು ತಪ್ಪದೆ ಪಾಲಿಸುವಂತೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ.

ದ.ಕ.ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯಡಿ ಪ್ಲಾಸ್ಟಿಕ್ ಧ್ವಜಗಳು, ಕ್ಯಾಂಡಿಸ್ಟಿಕ್‌ಗಳು, ಐಸ್‌ಕ್ರೀಮ್ ಸ್ಟಿಕ್‌ಗಳು, ಪ್ಲೇಟ್‌ಗಳು, ಕಪ್‌ಗಳು, ಚಮಚಗಳು, ಫೋರ್ಕ್‌ಗಳು, ಟ್ರೇಗಳು, ಸ್ವೀಟ್‌ಬಾಕ್ಸ್, ಸಿಗರೇಟ್ ಪ್ಯಾಕ್‌ಗಳ ಸಹಿತ ಅವುಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆಯನ್ನು ಈ ವರ್ಷದ ಜು. 1ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಡಿಸಿ ತಿಳಿಸಿದರು.

ಜಿಲ್ಲೆಯ ಎಲ್ಲಾ ಗ್ರಾಪಂಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ನಿಷೇಧಿತ ವಸ್ತುಗಳು ಕಂಡು ಬಂದರೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಪಂ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕರಾದ ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ದ.ಕ.ಜಿಪಂ ಸಿಇಒ ಡಾ.ಕುಮಾರ್, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಪರಿಸರ ಇಲಾಖೆಯ ಅಧಿಕಾರಿ ಕೀರ್ತಿಕುಮಾರ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಾಯಕ ಇಂಜಿನಿಯರ್ ದೀಪ್ತಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News