×
Ad

ಕಾಮಗಾರಿಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಲು ದ.ಕ.ಜಿಲ್ಲಾಧಿಕಾರಿ ಸೂಚನೆ

Update: 2022-07-25 21:16 IST

ಮಂಗಳೂರು: ಕೇಂದ್ರ ಸರಕಾರದ ಬ್ಲೂಫ್ಲ್ಯಾಗ್ ಯೋಜನೆಯಡಿ ಆಯ್ಕೆಯಾಗಿರುವ ತಣ್ಣೀರುಬಾವಿ ಬೀಚ್‌ನಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ಮತ್ತು ಬಿಜಿ ಇಂಡಿಯಾ ಲಿ. ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ನಿರ್ವಹಿಸುವ ಕಾಮಗಾರಿಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅಧಿಕಾರಿಗಳಿಗೆ ಸೂಚಿಸಿದರು.

ಬ್ಲೂಫ್ಲ್ಯಾಗ್ ಯೋಜನೆಯ ಕಾಮಗಾರಿಗಳ ಕುರಿತಂತೆ ದ.ಕ.ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ  ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಣ್ಣೀರುಬಾವಿ ಬೀಚ್‌ನಲ್ಲಿ ಬಿಜಿ ಇಂಡಿಯಾ ಲಿ.ನವರು ನಿರ್ಮಿಸಲಿರುವ ಆಹಾರ ಮಳಿಗೆಗಳು, ಶೌಚಾಲಯಗಳು, ವಾಹನಗಳ ಪಾರ್ಕಿಂಗ್ ಸಹಿತ ಬ್ಲೂ ಫ್ಲಾಗ್ ಯೋಜನೆಯಡಿ ನಿರ್ವಹಿಸುವ ಕಾಮಗಾರಿಗಳು ಮತ್ತು ತಣ್ಣೀರುಬಾವಿ ಬೀಚ್‌ನಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾಗುವ ಕಾಮಗಾರಿಗಳು ಪುನರಾವರ್ತನೆಗಳಾಗದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಸ್ಮಾರ್ಟ್ ಸಿಟಿ ಹಾಗೂ ಬಿಜಿ ಇಂಡಿಯಾ ಲಿ.ನವರು ಪರಸ್ಪರ ಚರ್ಚಿಸಿ ತಣ್ಣೀರು ಬಾವಿ ಬೀಚಿನಲ್ಲಿ ವ್ಯವಸ್ಥಿತವಾಗಿ ಕಾಮಗಾರಿಗಳನ್ನು ನಿರ್ವಹಿಸುವಂತೆ ಡಿಸಿ ನಿರ್ದೇಶನ ನೀಡಿದರು.

ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಮಿಶ್ರಾ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಾಣಿಕ, ಬಿಜಿ ಇಂಡಿಯಾ ಲಿ.ನ ಡಿಜಿಎಂ ಪ್ರಕಾಶ್ ದೇಶಪಾಂಡೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News