×
Ad

ವಿದ್ಯಾರ್ಥಿಗಳ ಅಶ್ಲೀಲ ವೀಡಿಯೊ ಪ್ರಕರಣಕ್ಕೂ ಪಬ್ ಪ್ರಕರಣಕ್ಕೂ ಸಂಬಂಧವಿಲ್ಲ : ಕಮಿಷನರ್ ಶಶಿಕುಮಾರ್

Update: 2022-07-26 09:40 IST

ಮ‌ಂಗಳೂರು, ಜು.26: ಬಲ್ಮಠ ರಸ್ತೆಯಲ್ಲಿರುವ ರಿಸೈಕಲ್ ರೆಸ್ಟೋರೆಂಟ್‌ಗೆ ಇಂದು ಬೆಳಗ್ಗೆ ಪೊಲೀಸ್ ಕಮಿಷನರ್‌ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು‌ ವಿದ್ಯಾರ್ಥಿಗಳ ಅಶ್ಲೀಲ ವೀಡಿಯೊ ಪ್ರಕರಣಕ್ಕೂ ಪಬ್ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದ ಕಮಿಷನರ್ ಶಶಿಕುಮಾರ್, ರಿಸೈಕಲ್ ರೆಸ್ಟೋರೆಂಟ್ ಪಬ್  ಬಹಳಷ್ಟು ವರ್ಷಗಳಿಂದ ಇದೆ. ನಿನ್ನೆ ರಾತ್ರಿ 9 ಗಂಟೆಯ ಸುಮಾರಿಗೆ ಸಂಘಟನೆಗೆ ಸೇರಿದ ಐದಾರು ಹುಡುಗರು ಬಂದಿದ್ದಾರೆ. ಇಲ್ಲಿನ ಬೌನ್ಸರ್ ದಿನೇಶ್ ಗೆ ಮೈನರ್ ಹುಡುಗ-ಹುಡುಗಿ ಇದ್ದಾರೆ ಎಂದು ಹೇಳಿದ್ದಾರೆ. ಹೀಗಾಗಿ ಮ್ಯಾನೇಜರ್ ಒಳಗೆ ಹೋಗಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಸ್ಥಳೀಯ ಕಾಲೇಜಿನ ಕೆಲ ವಿದ್ಯಾರ್ಥಿಗಳು ಇದ್ದರು ಎಂದವರು ತಿಳಿಸಿದರು.

ಮ್ಯಾನೇಜರ್ ಹೊರಗೆ ಹೋಗಲು ಹೇಳಿದ ಬಳಿಕ ವಿದ್ಯಾರ್ಥಿಗಳು ಹೊರಗೆ ಹೋಗಿದ್ದಾರೆ. ಬೌನ್ಸರ್ ಹೇಳಿದ ಪ್ರಕಾರ ಸಂಘಟನೆಯ ಕಾರ್ಯಕರ್ತರು ಪಬ್ ಒಳಗೆ ಹೋಗಿಲ್ಲ. ಹೊರ ಭಾಗದಲ್ಲೇ ಮಾತನಾಡಿ ಹೋಗಿದ್ದಾರೆ. ಈ ಬಗ್ಗೆ  ಸಿಸಿಟಿವಿ ಪರಿಶೀಲನೆ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಪಬ್ ಮ್ಯಾನೇಜರ್ ಮತ್ತು ಬೌನ್ಸರ್ ಹೇಳಿಕೆ ಪಡೆಯಲಾಗಿದೆ. ಹೊರಗಿನ ವ್ಯಕ್ತಿಗಳು ಬಂದು ಈ ರೀತಿ ಐಡಿ, ಲೈಸೆನ್ಸ್ ಕೇಳಲು ಬೇರೆಯವರಿಗೆ ಅವಕಾಶ ಇಲ್ಲ. ಈ ಬಗ್ಗೆ ಪರಾಮರ್ಶೆ ಮಾಡಿ ಕಾನೂನು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಮೊನ್ನೆ ನಡೆದ ಕಾಲೇಜಿನ ವಿದ್ಯಾರ್ಥಿಗಳ ಅಶ್ಲೀಲ ವೀಡಿಯೊ ಪ್ರಕರಣ ವಿದ್ಯಾರ್ಥಿಗಳು ಮತ್ತು ಈ ಘಟನೆ ವಿದ್ಯಾರ್ಥಿಗಳಿಗೆ ಸಂಬಂಧ ಇಲ್ಲ. ಅಂತಿಮ ಪದವಿ ವಿದ್ಯಾರ್ಥಿಗಳು ಪಬ್ ಗೆ ಬಂದಿದ್ದರು‌. ಈ ಪಬ್ ನಲ್ಲಿ ಹಾಕಿರೋ ನಿಯಮದ ಪ್ರಕಾರ 21 ವರ್ಷದವರು ಬರಬಹುದು. ಹೀಗಾಗಿ ಈ ಬಗ್ಗೆ ಮಾಹಿತಿ ಕಲೆ ಹಾಕಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಡಿಸಿಪಿ ಅಂಶು ಕುಮಾರ್, ಎಸಿಪಿ ಪರಮೇಶ್ವರ  ಹೆಗಡೆ, ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಇನ್ಸ್ ಪೆಕ್ಟರ್ ರಾಘವೇಂದ್ರ ಬೈಂದೂರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News