ರಾಹುಲ್‌, ಪ್ರಿಯಾಂಕಾ ಜೊತೆ ಇಡಿ ಕಚೇರಿಗೆ ಆಗಮಿಸಿದ ಸೋನಿಯಾ ಗಾಂಧಿ

Update: 2022-07-26 05:46 GMT

ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಇದೀಗ ಜಾರಿ ನಿರ್ದೇಶನಾಲಯದ ದಿಲ್ಲಿ ಕಚೇರಿಗೆ ಆಗಮಿಸಿದ್ದಾರೆ ಎಂದು ndtv.com ವರದಿ ಮಾಡಿದೆ. 

ಈ ನಡುವೆ ಪಕ್ಷದ ಪ್ರಧಾನ ಕಚೇರಿಯಲ್ಲಿ, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸದಸ್ಯರು ಇಡಿ ಸಮನ್ಸ್ ವಿರುದ್ಧ ಪ್ರತಿಭಟಿಸಿದರು. ಪಕ್ಷವು ಈ ಹಿಂದೆ ರಾಜ್‌ಘಾಟ್‌ನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿತ್ತು ಆದರೆ ಅಧಿಕಾರಿಗಳಿಂದ ಅನುಮತಿ ಪಡೆಯಲು ಸಾಧ್ಯವಾಗಲಿಲ್ಲ.  ಎಎನ್‌ಐ ಪ್ರಕಾರ, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಚೇರಿಯ ಹೊರಗೆ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News