ಎಸ್‍ಐಟಿ ಪ್ರಶ್ನಿಸಿ ಅರ್ಜಿ ಸಲ್ಲಿಕೆ: ಸೆ.5ಕ್ಕೆ ಜಾರಕಿಹೊಳಿ ಸೀಡಿ ಕೇಸ್ ಅಂತಿಮ ವಿಚಾರಣೆ

Update: 2022-07-26 12:58 GMT

ಬೆಂಗಳೂರು, ಜು.26: ಮಾಜಿ ಸಚಿವ, ಬಿಜೆಪಿ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ(ಎಸ್‍ಐಟಿ) ರಚಿಸಿ ಹೊರಡಿಸಿರುವ ಆದೇಶ ಹಾಗೂ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಜಾರಕಿಹೊಳಿ ದಾಖಲಿಸಿರುವ ಬ್ಲ್ಯಾಕ್‍ಮೇಲ್ ಪ್ರಕರಣದ ಎಫ್‍ಐಆರ್ ರದ್ದುಪಡಿಸುವಂತೆ ಕೋರಿ ಯುವತಿ ಹಾಗೂ ಮತ್ತಿಬ್ಬರು ಆರೋಪಿಗಳು ಸಲ್ಲಿಸಿರುವ ಅರ್ಜಿಗಳನ್ನು ಹೈಕೋರ್ಟ್ ಸೆ.5ರಂದು ಅಂತಿಮ ವಿಚಾರಣೆಗೆ ನಿಗದಿಪಡಿಸಿದೆ. 

ಸಂತ್ರಸ್ತ ಯುವತಿ, ಆರೋಪಿಗಳಾದ ಬಿ.ಎಂ.ನರೇಶ್ ಹಾಗೂ ಎಸ್.ಶ್ರವಣ್‍ಕುಮಾರ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. 

ಸೀಡಿ ಪ್ರಕರಣದಲ್ಲಿ ಎಸ್‍ಐಟಿ ನೇಮಕಾತಿಯ ಸಿಂಧುತ್ವದ ಬಗ್ಗೆ ನಿರ್ಧರಿಸುವಂತೆ ಹೈಕೋರ್ಟ್‍ಗೆ ಸುಪ್ರೀಂಕೋರ್ಟ್ ನಿರ್ದೇಶಿಸಿದ್ದು, ತ್ವರಿತವಾಗಿ ವಿಚಾರಣೆ ಪೂರ್ಣಗೊಳಿಸಬೇಕಿದೆ. ಹೀಗಾಗಿ, ಸೆ.5ರಂದು ಅರ್ಜಿಗಳ ಕುರಿತು ಅಂತಿಮ ವಿಚಾರಣೆ ಆರಂಭಿಸಲಾಗುವುದು ಎಂದು ತಿಳಿಸಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News