ಅಕ್ರಮ ಹಣ ವರ್ಗಾವಣೆ ಪ್ರಕರಣ: ಫಾರೂಕ್‌ ಅಬ್ದುಲ್ಲಾ ವಿರುದ್ಧ ಚಾರ್ಜ್‌ಶೀಟ್

Update: 2022-07-26 13:04 GMT

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ಹಣಕಾಸು ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ndtv.com ವರದಿ ಮಾಡಿದೆ. 

ಆರೋಪಪಟ್ಟಿ ಸಲ್ಲಿಸಿದ ಜಾರಿ ನಿರ್ದೇಶನಾಲಯ, 84ರ ಹರೆಯದ ಅಬ್ದುಲ್ಲಾ ಅವರನ್ನು ಹಲವು ಬಾರಿ ಪ್ರಶ್ನಿಸಿದೆ. ಕೊನೆಯ ಬಾರಿಗೆ ಮೇ 31 ರಂದು ಶ್ರೀನಗರದಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು.

ಫಾರೂಕ್‌ ಅಬ್ದುಲ್ಲಾ 2019 ರಲ್ಲಿ ಇದೇ ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ಡಿಸೆಂಬರ್ 2020 ರಲ್ಲಿ, ಸಂಸ್ಥೆಯು ಅಬ್ದುಲ್ಲಾ ಅವರ ₹ 11.86 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು.

ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್‌ಗೆ ಸೇರಿದ ಹಣವನ್ನು ವಶಪಡಿಸಿಕೊಂಡಿದ್ದ ಪ್ರಕರಣವು ಕ್ರಿಕೆಟ್ ಅಸೋಸಿಯೇಷನ್‌ನ ಪದಾಧಿಕಾರಿಗಳು ಸೇರಿದಂತೆ ಹಲವು ಜನರ ವಿವಿಧ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲ್ಪಟ್ಟಿತ್ತು ಎಂದು ಆರೋಪಿಸಲಾಗಿದೆ. ಸಂಘದ ಪದಾಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ ಸಲ್ಲಿಸಿದ ಆರೋಪಪಟ್ಟಿಯ ಆಧಾರದ ಮೇಲೆ ಸಂಸ್ಥೆ ಹಣ ವರ್ಗಾವಣೆಯ ಕುರಿತು ತನಿಖೆ ಆರಂಭಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News