×
Ad

ಮಂಗಳೂರು; ಪುತ್ರಿಯ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿ ತಂದೆಗೆ 20 ವರ್ಷ ಕಠಿಣ ಶಿಕ್ಷೆ

Update: 2022-07-26 21:13 IST
ಸಾಂದರ್ಭಿಕ ಚಿತ್ರ

ಮಂಗಳೂರು, ಜು.26: ಅಪ್ರಾಪ್ತ ವಯಸ್ಸಿನ ಪುತ್ರಿಯ ಮೇಲೆ ತಂದೆಯೇ ನಡೆಸಿದ್ದಾನೆ ಎನ್ನಲಾದ ಆರೋಪವು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯವು ಮಂಗಳವಾರ ತೀರ್ಪು ನೀಡಿದೆ.

ವಿಟ್ಲ ಪೆರುವಾಯಿ ಗ್ರಾಮದ ಅಬ್ದುಲ್ ಅಝೀಝ್ (70) ಶಿಕ್ಷೆಗೊಳಗಾದ ಅಪರಾಧಿ. 2020ರ ಮಾರ್ಚ್‌ನಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ದ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ನ್ಯಾಯಾಲಯಕ್ಕೆ ಸಲ್ಲಿಕೆಯಾದ ಸಾಕ್ಷಾಧಾರಗಳು ಹಾಗೂ ಕೂಲಂಕಷ ತನಿಖೆಯನ್ನು ಆಧರಿಸಿ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ತೀರ್ಪು ಪ್ರಕಟಿಸಿದ್ದಾರೆ.

ಈ ಪ್ರಕರಣದಲ್ಲಿ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ತನಿಖೆ ನಡೆಸಿ, ಆರೋಪಿಯ ವಿರುದ್ದ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ಸರಕಾರದ ಪರವಾಗಿ ವಾದಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News