PSI ನೇಮಕಾತಿ ಹಗರಣ: ಸ್ವ ಇಚ್ಛಾ ಹೇಳಿಕೆ ದಾಖಲಿಸಲು ಅಮೃತ್ ಪೌಲ್ ಸಮ್ಮತಿ

Update: 2022-07-26 15:49 GMT
ಅಮೃತ್ ಪೌಲ್ 

ಬೆಂಗಳೂರು, ಜು.26: ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ಮಂಪರು ಪರೀಕ್ಷೆಗೆ ಒಳಪಡಲು ನಿರಾಕರಿಸಿರುವ ಐಎಎಸ್ ಅಧಿಕಾರಿ ಅಮೃತ್ ಪೌಲ್ ಅವರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರ ಎದುರು ಸ್ವ ಇಚ್ಛಾ ಹೇಳಿಕೆ ದಾಖಲಿಸಲು ಸಮ್ಮತಿ ಸೂಚಿಸಿದ್ದಾರೆ.  

ಅಮೃತ್ ಪೌಲ್ ಅವರು, ಕೋರ್ಟ್‍ನಲ್ಲಿ ಸಿಆರ್‍ಪಿಸಿ ಸೆಕ್ಷನ್ 164ರ ಅನ್ವಯ ಸ್ವಇಚ್ಛಾ ಹೇಳಿಕೆ ದಾಖಲಿಸಲು ಸಮ್ಮತಿ ಸೂಚಿಸಿದ್ದಾರೆ. ಇದೇ ವೇಳೆ ಪೌಲ್‍ಗೆ ಸ್ವ ಇಚ್ಛಾ ಹೇಳಿಕೆ ದಾಖಲಿಸಲು ಅವಕಾಶ ಕಲ್ಪಿಸುವ ಬಗ್ಗೆ ಸಿಐಡಿ ತನಿಖಾಧಿಕಾರಿಗಳು ಇನ್ನಷ್ಟೇ ನಿರ್ಧಾರ ತೆಗೆದುಕೊಳ್ಳಬೇಕಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಅಮೃತ್ ಪೌಲ್ ಅವರು, ಮಂಪರು ಪರೀಕ್ಷೆಗೆ ಒಳಪಡಲು ನಿರಾಕರಿಸಿದ್ದರು. ಪೌಲ್ ಆರೋಗ್ಯ ಚೆನ್ನಾಗಿಲ್ಲ. ಪ್ರತಿ ದಿನ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಹೀಗಾಗಿ, ಮಂಪರು ಪರೀಕ್ಷೆಗೆ ಒಪ್ಪಿಗೆ ಇಲ್ಲ ಎಂದು ಪೌಲ್ ಪರ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‍ಗೆ ಈ ಹಿಂದೆ ತಿಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News