×
Ad

ಈಜಿಪುರ ಮೇಲ್ಸೇತುವೆ ಕಾಮಗಾರಿ ವಿಳಂಬ: ಗುತ್ತಿಗೆದಾರರೊಂದಿಗೆ ಸಭೆ ನಡೆಸುವಂತೆ ಹೈಕೋರ್ಟ್ ಸೂಚನೆ

Update: 2022-07-26 22:33 IST

ಬೆಂಗಳೂರು, ಜು.26: ನಗರದ ಈಜಿಪುರ ಹಾಗೂ ಕೋರಮಂಗಲ ನಡುವಿನ ಮೇಲ್ಸೇತುವೆ ನಿರ್ಮಾಣ ಕಾರ್ಯದ ವಿಳಂಬ ಹಿನ್ನೆಲೆ ಒಂದು ವಾರದಲ್ಲಿ ಈ ಬಗ್ಗೆ ಗುತ್ತಿಗೆದಾರರೊಂದಿಗೆ ಸಭೆ ನಡೆಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿದೆ. 

ಈ ಕುರಿತು ಕೋರಮಂಗಲ ನಿವಾಸಿ ಆದಿನಾರಾಯಣ ಶೆಟ್ಟಿ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಸೂಚನೆ ನೀಡಿದೆ.

ಈಜಿಪುರ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಮುಂದುವರಿಸಲು ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್‍ಗೆ ಅನುಮತಿ ನೀಡಬೇಕೆ ಇಲ್ಲವೇ ಹೊಸದಾಗಿ ಟೆಂಡರ್ ಕರೆಯಬೇಕೆ ಎಂಬ ಕುರಿತಂತೆ ಸ್ವತಂತ್ರವಾಗಿ ನಿರ್ಣಯ ಕೈಗೊಳ್ಳುವಂತೆ ಬಿಬಿಎಂಪಿಗೆ ನ್ಯಾಯಪೀಠವು ನಿರ್ದೇಶನ ನೀಡಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News