ಮೊಬೈಲ್ ಕಳ್ಳತನ ಪ್ರಕರಣಕ್ಕೆ ಎಫ್‍ಐಆರ್ ಕಡ್ಡಾಯ: ನಗರ ಪೊಲೀಸ್ ಆಯುಕ್ತ ಪ್ರತಾಪ್‍ರೆಡ್ಡಿ
Update: 2022-07-27 00:03 IST
ಬೆಂಗಳೂರು, ಜು.26: ನಗರ ವ್ಯಾಪ್ತಿಯಲ್ಲಿ ಮೊಬೈಲ್ ಕಳ್ಳತನ ಪ್ರಕರಣಗಳು ದೂರುಗಳು ಬಂದಲ್ಲಿ, ಕಡ್ಡಾಯವಾಗಿ ಎಫ್‍ಐಆರ್ ದಾಖಲಿಸಬೇಕು ಎಂದು ಠಾಣಾಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್‍ರೆಡ್ಡಿ ಸೂಚನೆ ನೀಡಿದ್ದಾರೆ.
ಮಂಗಳವಾರ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾರ್ವಜನಿಕರು ಮೊಬೈಲ್ ಕಳವು ದೂರುಗಳನ್ನು ಸಲ್ಲಿಸಿದರೆ, ಗಂಭೀರವಾಗಿ ಪರಿಗಣಿಸಿ ಮೊಕದ್ದಮೆ ದಾಖಲಿಸಬೇಕು. ಇಲ್ಲದಿದ್ದರೆ, ಠಾಣಾಧಿಕಾರಿಗಳನ್ನು ಹೊಣೆಯಾಗಿಸಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇತ್ತೀಚಿಗೆ ನಡೆದ ವಾರ್ಷಿಕ ಸಭೆಯಲ್ಲಿ ಚರ್ಚಿಸಲಾಗಿದ್ದು, ಮೊಬೈಲ್ ಕಳೆದುಹೋದರೆ ಇ-ಲಾಸ್ ಸಾಫ್ಟ್‍ವೇರ್‍ನಲ್ಲಿ ದೂರು ನೀಡಬಹುದು. ಆದರೆ, ಮೊಬೈಲ್ ಕಳ್ಳತನ ಮಾಡಿದರೆ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ದೂರು ನೀಡಬಹುದು. ಪೊಲೀಸರು ಇಂತಹ ಪ್ರಕರಣಗಳಲ್ಲಿ ಎಫ್‍ಐಆರ್ ಕಡ್ಡಾಯವಾಗಿ ದಾಖಲಿಸಲೇಬೇಕು ಎಂದರು.