×
Ad

ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತನ ಹತ್ಯೆ ಖಂಡಿಸಿದ ಸಿಎಂ ಬೊಮ್ಮಾಯಿ

Update: 2022-07-27 00:59 IST

ಬೆಂಗಳೂರು,ಜು. 27: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ನಡೆಸಿದ್ದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಂಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ,  'ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ' ಎಂದು ತಿಳಿಸಿದ್ದಾರೆ.

ಇದನ್ನೂ ಓದಿ... ಬೆಳ್ಳಾರೆ: ತಂಡದಿಂದ ಯುವಕನ ಹತ್ಯೆ

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News