ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರ ವಿಚಾರಣೆ
Update: 2022-07-27 13:36 IST
ಸುಳ್ಯ, ಜು.27: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ವಿಚಾರಣೆಗೆ ನಡೆಸಲಾಗಿದ್ದು, ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರವೀಣ್ ಅವರ ಅಕ್ಷಯ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿರುವ ಮಧು ರಾಯನ್ ಎಂಬವರು ನೀಡಿರುವ ದೂರಿನಂತೆ ಮೂವರು ಅಪರಿಚಿತರ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಮಂಗಳವಾರ ರಾತ್ರಿ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದಾರೆ.