×
Ad

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಪ್ಪಿತಸ್ಥರ ಬಂಧನಕ್ಕೆ ಸಿದ್ದರಾಮಯ್ಯ, ಡಿಕೆಶಿ ಆಗ್ರಹ

Update: 2022-07-27 15:51 IST

ಬೆಂಗಳೂರು: ದ.ಕ. ಜಿಲ್ಲೆಯ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖಂಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ,  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ,ಜಾತಿ,ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿ, 'ದಕ್ಷಿಣ ಕನ್ನಡ ಜಿಲ್ಲೆಯ, ಸುಳ್ಯ ತಾಲೂಕಿನ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಅವರು ಭೀಕರವಾಗಿ ಹತ್ಯೆಗೀಡಾಗಿರುವುದು ಬೇಸರದ ಸಂಗತಿ. ಅವರ ಕುಟುಂಬ ಹಾಗೂ ಸ್ನೇಹಿತ ವರ್ಗಕ್ಕೆ ಸಂತಾಪಗಳು. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡುತ್ತೇನೆ' ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News