ಮಡಿಕೇರಿ- ಮಂಗಳೂರು ರಸ್ತೆ ಲಘು ವಾಹನ ಸಂಚಾರಕ್ಕೆ ಮುಕ್ತ

Update: 2022-07-27 12:01 GMT

ಮಡಿಕೇರಿ ಜು.27 : ಕಳೆದ ಕೆಲವು ದಿನಗಳಿಂದ ವಾಹನ ಸಂಚಾರ ನಿಷೇಧಿಸಲ್ಪಟ್ಟಿದ್ದ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಮಡಿಕೇರಿ-ತಾಳತ್'ಮನೆ ಜಂಕ್ಷನ್'ವರೆಗಿನ ಮಾರ್ಗವನ್ನು ಇದೀಗ ಲಘುವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಈ ಸಂಬಂಧ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.

ಅದರಂತೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಡಳಿತ ಭವನದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ 7+1 ಸೀಟರ್'ವರೆಗಿನ ವಾಹನಗಳು ದ್ವಿಮುಖವಾಗಿ ಸಂಚರಿಸಬಹುದಾಗಿದೆ.

ಉಳಿದಂತೆ 7+1 ಸೀಟರ್'ಗಿಂತ ಹೆಚ್ಚಿನ ಸಾಮರ್ಥ್ಯದ 4 ಚಕ್ರ ವಾಹನಗಳು ಮಂಗಳೂರು ಕಡೆಗೆ ಏಕಮುಖವಾಗಿ ಸಂಚರಿಸಬಹುದದಾಗಿದ್ದು, 7+1 ಸೀಟರ್'ಗಿಂತ ಹೆಚ್ಚಿನ ಸಾಮಥ್ರ್ಯದ 4 ಚಕ್ರ ವಾಹನಗಳು ಮಂಗಳೂರಿನಿಂದ ಮಡಿಕೇರಿ ಕಡೆಗೆ ಸಂಪಾಜೆ - ತಾಳತ್ತಮನೆ- ಮೇಕೇರಿ ಮಾರ್ಗವಾಗಿ ಏಕಮುಖವಾಗಿ ಸಂಚರಿಸಬಹುದೆಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

16.2 ಟನ್ ಒಳಪಟ್ಟ ಸರಕು ಸಾಗಣೆ ವಾಹನಗಳು, ಬಸ್‍ಗಳು, ಅನಿಲ, ರಸಗೊಬ್ಬರ ಹಾಗೂ ಇಂಧನ ಸಾಗಣೆ ವಾಹನಗಳು ಎರಡೂ ರಸ್ತೆಗಳಲ್ಲಿ ಏಕಮುಖವಾಗಿ ಸಂಚರಿಸಬಹುದೆಂದು ಅವರು ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News