PSI ನೇಮಕಾತಿ ಹಗರಣ: ಸಿಐಡಿಯಿಂದ ಕೋರ್ಟ್ ಗೆ ಚಾರ್ಜ್‍ಶೀಟ್ ಸಲ್ಲಿಕೆ

Update: 2022-07-27 12:31 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.27: ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ನಗರದ ಒಂದನೆ ಎಸಿಎಂಎಂ ಕೋರ್ಟ್‍ಗೆ ಸಿಐಡಿ ಅಧಿಕಾರಿಗಳು ಬುಧವಾರ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.  

ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಕೋರ್ಟ್‍ಗೆ ಸಿಐಡಿಯಿಂದ ಚಾರ್ಜ್‍ಶೀಟ್ ಸಲ್ಲಿಕೆಯಾಗಿದೆ.

3,065 ಪುಟಗಳ ಚಾರ್ಜ್‍ಶೀಟ್‍ನಲ್ಲಿ 202 ವಿಟ್ನೆಸ್‍ಗಳು, 330 ದಾಖಲಾತಿಗಳನ್ನು 30 ಆರೋಪಿಗಳ ವಿರುದ್ಧ ಸೇರಿಸಲಾಗಿದೆ. ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಸೇರಿ ಕೆಲ ಆರೋಪಿಗಳನ್ನು ಬಿಟ್ಟು ಉಳಿದ ಆರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಅಮೃತ್ ಪೌಲ್ ವಿರುದ್ಧದ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಲು ಸಾಕಷ್ಟು ಕಾಲಾವಕಾಶ ಇದ್ದು, ಹೆಚ್ಚಿನ ಮಾಹಿತಿಯನ್ನು ಸಿಐಡಿ ಕಲೆ ಹಾಕುತ್ತಿದೆ. 

ಪಿಎಸ್ಸೈ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು, ರಾಜಕಾರಣಿಗಳು ಸೇರಿ ಹಲವರನ್ನು ಈಗಾಗಲೇ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನೇಮಕಾತಿ ವಿಭಾಗದ ಕಚೇರಿಯಲ್ಲಿಯೇ ಉತ್ತರದ ಹಾಳೆಗಳನ್ನು ತಿದ್ದುವ ಕೆಲಸವನ್ನು ಮಾಡಿದ್ದರು. 

ಬ್ಲೂಟೂತ್ ಸೇರಿ ಹೊಸ ವಿಧಾನವನ್ನು ಬಳಕೆಯನ್ನು ಮಾಡಿ ನಕಲನ್ನು ಮಾಡಿ ಪರೀಕ್ಷೆಯನ್ನು ಉತ್ತಮ ಅಂಕವನ್ನು ಗಳಿಸಿ ಸೆಲೆಕ್ಷನ್ ಆಗುವ ಹಂತದಲ್ಲಿದ್ದರು. ಇದೀಗ ಇವರ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News