ಬೆಂಗಳೂರು: ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ
Update: 2022-07-27 17:39 IST
ಬೆಂಗಳೂರು, ಜು.27: ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನೀರಿನ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಹೊಸಕೋಟೆ ಬಳಿ ನಡೆದಿದೆ.
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಲಕ್ಕೂರು ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಪ್ರಿತಾ(18) ಹಾಗೂ ರಾಜೇಶ್ವರಿ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯರು ಎಂದು ಗುರುತಿಸಲಾಗಿದೆ.
ಮಾಲೂರಿನ ಸುಪ್ರಿತಾ ಮತ್ತು ಹೊಸಕೋಟೆ ತಾಲೂಕಿನ ಬಾಗೂರಿನ ರಾಜೇಶ್ವರಿ ಇಬ್ಬರೂ ಒಟ್ಟಿಗೆ ತಿರುವರಂಗ ಸಮೀಪದ ನೀರಿನ ಕಾಲುವೆಗೆ ಹಾರಿದ್ದಾರೆ ಎನ್ನಲಾಗಿದೆ. ಆದರೆ, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಅನುಗೊಂಡನಹಳ್ಳಿ ಠಾಣಾ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.