×
Ad

ನಿಟ್ಟೂರು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ/ಚಿಕ್ಕಿ ವಿತರಣೆ

Update: 2022-07-27 17:46 IST

ಉಡುಪಿ : ರಾಜ್ಯ ಸರಕಾರದ ಸೂಚನೆಯಂತೆ ಇಲ್ಲಿನ ನಿಟ್ಟೂರು ಪ್ರೌಢಶಾಲೆಯಲ್ಲಿ ಇಂದಿನಿಂದ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ/ ಶೇಂಗಾ ಚುಕ್ಕಿ/ ಬಾಳೆಹಣ್ಣು ವಿತರಿಸಲಾಗುತ್ತಿದೆ. 

ಈ ಕಾರ್ಯಕ್ರಮಕ್ಕೆ  ನಿಟ್ಟೂರು ಎಜುಕೇಶನಲ್ ಸೊಸೈಟಿಯ ಜೊತೆ ಕಾರ್ಯದರ್ಶಿ ದಿನೇಶ್ ಪಿ. ಪೂಜಾರಿ ಚಾಲನೆ ನೀಡಿದರು. ಶಾಲೆಯ  ಮುಖ್ಯೋಪಾಧ್ಯಾಯಿನಿ ಅನಸೂಯ ಕಾರ್ಯಕ್ರಮ ನಿರೂಪಿಸಿದರು. 

ಶಿಕ್ಷಕ -ರಕ್ಷಕ ಸಂಘದ ಸಂಯೋಜಕ ರಾಮದಾಸ ನಾಯ್ಕ್ ಮತ್ತು ಪದಾಧಿಕಾರಿಗಳು, ಶಾಲೆಯ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News