×
Ad

ಡೀಸೆಲ್ ಸಹಾಯಧನ: ‘ಫ್ರೂಟ್ಸ್’ ತಂತ್ರಾಂಶದಲ್ಲಿ ನೋಂದಣಿಗೆ ಆ.20 ಕೊನೆಯ ದಿನ

Update: 2022-07-27 17:48 IST

ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಲ್ಲಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಿ, ಕೃಷಿ ಉತ್ಪಾದಕತೆ ಯನ್ನು ಹೆಚ್ಚಿಸಲು ಹಾಗೂ ರೈತರಿಗೆ ಇಂಧನದ ವೆಚ್ಚ ಕಡಿಮೆ ಮಾಡುವ ಸಲುವಾಗಿ ಪ್ರತಿ ಎಕರೆಗೆ 250 ರೂ.ನಂತೆ ಗರಿಷ್ಟ 5 ಎಕರೆಯವರೆಗೆ 1250 ರೂ. ಗಳನ್ನು ಡಿಬಿಟಿ ಮೂಲಕ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆ ಯನ್ನು ಜಾರಿಗೊಳಿಸಲಾಗಿದೆ. 

ಈ ಯೋಜನೆಯಡಿ ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಗರಿಷ್ಟ ೫ ಎಕರೆಯವರೆಗೆ ಪ್ರೂಟ್ಸ್ ಪೋರ್ಟಲ್‌ನಲ್ಲಿ ನಮೂದಿಸಿರುವ ಹಿಡುವಳಿಯ ಆಧಾರದ ಮೇಲೆ ರೈತರಿಗೆ ಡೀಸೆಲ್ ಸಹಾಯಧನ ವರ್ಗಾವಣೆಯಾಗಲಿದೆ. 

ಜಿಲ್ಲೆಯ ರೈತರು ಈ ಯೋಜನೆಯ ಪ್ರಯೋಜನ ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್‌ಗಳ ವಿಸ್ತೀರ್ಣವನ್ನು ಪ್ರೂಟ್ಸ್ ಪೋರ್ಟಲ್‌ನಲ್ಲಿ ಆಗಸ್ಟ್ ೨೦ರೊಳಗೆ ನೋಂದಣಿ ಮಾಡಿಸಬೇಕು. ಈ ದಿನಾಂಕದವರೆಗೆ ಫ್ರೂಟ್ಸ್  ಪೋರ್ಟಲ್‌ನಲ್ಲಿ ನೋಂದಾವಣಿಯಾದ ವಿಸ್ತೀರ್ಣಕ್ಕನುಗುಣವಾಗಿ ಡೀಸೆಲ್ ಸಬ್ಸಿಡಿ ಡಿಬಿಟಿ ಮುಖಾಂತರ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ದೊರೆಯಲಿದೆ.

ಇದುವರೆಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಕೊಳ್ಳದ ರೈತರು ಕೂಡಲೇ ನೋಂದಣಿ ಮಾಡಿಸಿ ಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News