×
Ad

ಪಿಎಂ ಕಿಸಾನ್ ಯೋಜನೆಯಡಿ ಸಹಾಯಧನಕ್ಕೆ ಇ-ಕೆವೈಸಿ ಕಡ್ಡಾಯ

Update: 2022-07-27 17:55 IST
ಸಾಂದರ್ಭಿಕ ಚಿತ್ರ

ಉಡುಪಿ : ಕೃಷಿ ಇಲಾಖೆ ವತಿಯಿಂದ ಜಾರಿಗೊಳಿಸಲಾದ ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲಾ ಅರ್ಹ ಪಿಎಂ ಕಿಸಾನ್ ಫಲಾನುಭವಿಗಳು ವೆಬ್‌ಸೈಟ್ - https://pmkisan.gov.in- ಅಥವಾ ಪಿಎಂ ಕಿಸಾನ್ ಮೊಬೈಲ್ ಆ್ಯಪ್ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಲು ಜುಲೈ ೩೧ ಕೊನೆಯ ದಿನವಾಗಿದೆ.

ಆಧಾರ್ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾದ ಫಲಾನುಭವಿಗಳು ಮೇಲಿನ ಲಿಂಕ್ ಮೇಲೆ ಕ್ಲಿಕ್ಕಿಸಿ ಆಧಾರ ನಂಬರ್ ಹಾಗೂ ಕ್ಯಾಪ್‌ಚಾ ನಮೂದಿಸಿ ನಂತರ ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ದಾಖಲಿಸಿ ಉಚಿತವಾಗಿ ಹಾಗೂ ಆಧಾರ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ನಮೂದಿಸಿ ಅಥವಾ ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ. 

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News