×
Ad

ಪ್ರವೀಣ್ ಹತ್ಯೆ; ಗೃಹ ಸಚಿವರಿಗೆ ಶಾಸಕ ವೇದವ್ಯಾಸ್ ಕಾಮತ್ ಮನವಿ

Update: 2022-07-27 19:10 IST
ವೇದವ್ಯಾಸ್ ಕಾಮತ್

ಮಂಗಳೂರು : ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಗೈದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿರುವ ಶಾಸಕ ಕಾಮತ್, ಹತ್ಯೆಯ ಹಿಂದೆ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕೈವಾಡವಿದೆ. ದೇಶ ವಿರೋಧಿ ಮಾನಸಿಕತೆಯಲ್ಲಿರುವ ಮತಾಂಧ ಶಕ್ತಿಗಳು ಭಯೋತ್ಪಾದನೆ ಸೃಷ್ಟಿಸಲು ರಾಷ್ಟ್ರೀಯವಾದಿ ಯುವಕನ ಹತ್ಯೆ ಮಾಡಿದ್ದಾರೆ. ಕರಾವಳಿಯಲ್ಲಿ ನೆಲೆಯೂರುತ್ತಿರುವ ಉಗ್ರರನ್ನು ಬುಡ ಸಮೇತ ಕಿತ್ತು ಹಾಕಲು ಕಠಿಣ ಕಾನೂನು ರೂಪಿಸುವಂತೆ ಗೃಹ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News